ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೇಸಿಗೆಯಲ್ಲಿ ನೀರು/ವಿದ್ಯುತ್ ಸಮಸ್ಯೆ ತಲೆದೋರದಂತೆ ಗಮನವಹಿಸಿ – ಸಂಗಮೇಶ ಎನ್. ಜವಾದಿ

ಚಿಟಗುಪ್ಪಾ: ” ನೀರು, ವಿದ್ಯುತ್ ಮತ್ತಿತರ ಮೂಲಭೂತ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಬೇಕು” ಎಂದು ಸಾಹಿತಿ, ಸಾಮಾಜಿಕ ಸೇವಕರು, ಹೋರಾಟಗಾರರಾದ ಸಂಗಮೇಶ ಎನ್ ಜವಾದಿ ರವರು ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಗಮೇಶ ಎನ್ ಜವಾದಿ ರವರು, “ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರು, ರೈತರು ವಿದ್ಯುತ್ ಮತ್ತು ನೀರಿನ ಸಮಸ್ಯೆಯನ್ನು ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಎದುರಿಸುತ್ತಾರೆ. ಈ ದಿನಗಳಲ್ಲಿ ನೀರಿನ ಮತ್ತು ವಿದ್ಯುತ್ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ವಿದ್ಯುತ್ ಅವಾಗವಾಗ ಕಣ್ಣು ಮುಚ್ಚಾಲೆ ಆಟ ಆಡುತ್ತಿರುತ್ತದೆ. ವಿಶೇಷವಾಗಿ ಪ್ರಾಣಿ-ಪಕ್ಷಿಗಳಿಗೆ ನೀರಿನ ಸಮಸ್ಯೆ ಇರುತ್ತದೆ. ಇವುಗಳಿಗೆ ನೀರುಣಿಸುವ ಕೆಲಸ ಆಗಬೇಕು. ಈ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಈ ಕೂಡಲೇ ಕೈಗೊಳ್ಳಬೇಕು. ಯಾವುದೇ ರೀತಿಯಲ್ಲಿ ಜನಸಾಮಾನ್ಯರಿಗೆ ಸಂಕಟ ಆಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ, ಆದಷ್ಟು ಶೀಘ್ರದಲ್ಲಿಯೇ ಸಮಸ್ಯೆ ಇರುವಂತ ಸ್ಥಳದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಉತ್ತಮವಾಗಿರುತ್ತದೆ. ಇದರಿಂದ ಮುಂದೆ ಆಗುವಂತಹ ಅನಾಹುತಗಳು ಸಂಭವಿಸದಂತೆ ತಡೆಹಿಡೆಯಬಹುದು. ಈ ಮುಖಾಂತರ ಜನಸಾಮಾನ್ಯರ ನೋವುಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತದೆ.
ಯಾವುದೇ ಕಾರಣಕ್ಕೂ ನೀರಿನ ಹಾಗೂ ವಿದ್ಯುತ್ ಸಮಸ್ಯೆ ತಲೆದೋರದಂತೆ ಗಮನ ಹರಿಸಬೇಕು” ಎಂದು ಸಂಗಮೇಶ ಎನ್ ಜವಾದಿ ರವರು ತಿಳಿಸಿದರು.

ಬೇಸಿಗೆ ಬಂದಿದೆ, ಎಚ್ಚರವಾಗಿರಿ!

ನೀರು-ವಿದ್ಯುತ್ ಸಮಸ್ಯೆ ಜನಸಾಮಾನ್ಯರನ್ನು ಕಾಡದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಪ್ರಾಣಿ-ಪಕ್ಷಿಗಳಿಗೂ ನೀರು ಸಿಗುವ ವ್ಯವಸ್ಥೆ ಆಗಲಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!