ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಇಂದ್ರಜಾಗೆ ಚಿನ್ನದ ಪದಕ : ಕಾಲೇಜು ಮತ್ತು ತಾಲೂಕಿಗೆ ಕೀರ್ತಿ

ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿರುವ ಪ್ರತಿಷ್ಠಿತ ವಿವಿಎಸ್‌ಎಸ್ ಟ್ರಸ್ಟ್ ನ ವಿನೂತನ ಮಹಿಳಾ ಪದವಿ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ವಿದ್ಯಾರ್ಥಿನಿ ಎಮ್ಮಿಗನೂರಿನ ಇಂದ್ರಜಾ ಅತ್ಯಧಿಕ ಅಂಕದೊಂದಿಗೆ ಚಿನ್ನದ ಪದಕಕ್ಕೆ ಭಾಜನರಾಗುವ ಮೂಲಕ ಕಾಲೇಜಿನ ಕೀರ್ತಿ ಪತಾಕೆ ಹಾರಿಸಿದ್ದಾಳೆ.
ಪದವಿಯಲ್ಲಿ ಚಿನ್ನದ ಪದಕ (ಗೋಲ್ಡ್ ಮೆಡಲ್) ಗಳಿಸುವುದು ಶೈಕ್ಷಣಿಕ ಸಾಧನೆಯ ಉನ್ನತ ಶಿಖರವಾಗಿದೆ. 2025-26ನೇ ಸಾಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಪದವಿ ಫಲಿತಾಂಶ ಪ್ರಕಟಿಸಿದ್ದು, ಬಿಎ ವಿಭಾಗದಲ್ಲಿ ಇಂದ್ರಜಾ 91.38 ಶೇಕಡಾ ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ತನ್ನದಾಗಿಸಿಕೊಂಡಿದ್ದಾಳೆ.
ಗ್ರಾಮೀಣ ಭಾಗದಲ್ಲಿದ್ದುಕೊಂಡು ಅದರಲ್ಲಿ ರೈತನ ಮಗಳಾಗಿ ಶೈಕ್ಷಣಿಕ ರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಬೇಕು. ಮತ್ತು ನಿರಂತರ ಕಲಿಕೆ, ಓದು, ಪರಿಶ್ರಮದೊಂದಿಗೆ ಮೊದಲ ಪ್ರಯತ್ನದಲ್ಲೇ ಅಮೋಘ ಸಾಧನೆ ಮಾಡಿದ್ದು, ಕಾಲೇಜಿನ ಮತ್ತು ತಾಲೂಕಿನ ಕೀರ್ತಿ ಹೆಚ್ಚಿಸುವ ಜೊತೆಗೆ ಶಿಕ್ಷಣ ಪ್ರೇಮಿಗಳ ಮನಗೆದ್ಧಿದ್ದಾಳೆ.
ಪದವಿಯಲ್ಲಿ ಸಾಧನೆ ಮಾಡಿದ್ದು ಏ.21ರಂದು ವಿಜಯಪುರ ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆಯುವ 17ನೇ ಘಟಿಕೋತ್ಸವ ಸಮಾರಂಭದಲ್ಲಿ ಅಧಿಕೃತವಾಗಿ ಚಿನ್ನದ ಪದಕ ಪಡೆಯಲು ಉತ್ಸುಕರಾಗಿದ್ದಾಳೆ.
ಈ ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಮದ್ದಾನೆಪ್ಪ ಬಿಡನಾಳ, ವಿವಿಎಸ್‌ಎಸ್ ಟ್ರಸ್ಟ್ ಅಧ್ಯಕ್ಷೆ ರಾಜಮ್ಮ ಹುಲಗಪ್ಪ, ಕಾರ್ಯದರ್ಶಿ ಪ್ರಕಾಶ್ ಜಿ.ನಾಯಕ ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ಸಿಬ್ಬಂದಿಗಳು ಪ್ರಶಂಸಿಸುವ ಜೊತೆಗೆ ಅಭಿನಂದನೆ ಸಲ್ಲಿಸಿದ್ದು, ಮುಂದಿನ ಶೈಕ್ಷಣಿಕ ಮಟ್ಟವೂ ಇನ್ನಷ್ಟು ಸಾಧನೆಗೆ ಪುಷ್ಠಿ ನೀಡಲೆಂದು ಹಾರೈಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!