ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ದುರ್ಗಾದೇವಿ ಮೂರ್ತಿಯ ಭವ್ಯ ಮೆರವಣಿಗೆ

ವಿಜಯಪುರ/ ತಾಳಿಕೋಟೆ: ಪಟ್ಟಣದ ಮಾದರ ಚೆನ್ನಯ್ಯ ಸಮಾಜದ ಆರಾಧ್ಯ ದೇವತೆ ಶ್ರೀ ದುರ್ಗಾಮಾತೆಯ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ಭವ್ಯ ಮೆರವಣಿಗೆ ಜರುಗಿತು. ಜಾತ್ರೋತ್ಸವದ ಅಂಗವಾಗಿ ಬೆಳಿಗ್ಗೆ 9-00 ಘಂಟೆಗೆ ಪಟ್ಟಣದ ಶ್ರೀ ಅಂಬಾಭವಾನಿ ದೇವಸ್ಥಾನದಿಂದ ಸಕಲ ವಾದ್ಯ ಮೇಳಗಳೊಂದಿಗೆ ಆರಂಭವಾದ ಶ್ರೀ ದುರ್ಗಾದೇವಿ ಮೂರ್ತಿಯ ಭವ್ಯ ಮೆರವಣಿಗೆಯು ಕತ್ರಿ ಬಜಾರ್, ಪಂಚ ಶಹೀದ ದರ್ಗಾ, ಭೋವಿ ಸಮಾಜದ ಪಿಲೇಕಮ್ಮ ದೇವಸ್ಥಾನ ಮಾರ್ಗವಾಗಿ ಮಾದರ ಚೆನ್ನಯ್ಯ ಬಡಾವಣೆಗೆ ತಲುಪಿ ದೇವಸ್ಥಾನಕ್ಕೆ ಪ್ರವೇಶಿಸಿತು. ನಂತರ ಸಕಲ ಭಕ್ತಾದಿಗಳಿಗೆ ಮಹಾಪ್ರಸಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮೆರವಣಿಗೆಯಲ್ಲಿ ತಾಳಿಕೋಟೆ ಪುರಸಭೆ ಮಾಜಿ ಸದಸ್ಯರಾದ ಪ್ರಭುಗೌಡ ಮದರಕಲ್ಲ, ಜೈಸಿಂಗ್ ಮೂಲಿಮನಿ, ಮುಸ್ಲಿಂ ಬ್ಯಾಂಕ್ ಅಧ್ಯಕ್ಷ ಮಹಿಬೂಬ ಕೆಂಭಾವಿ, ಸಮಾಜದ ಪ್ರಮುಖರಾದ ಬಸ್ಸು ಮಾದರ, ರಾಮಣ್ಣ ಕಟ್ಟಿಮನಿ, ಗೋಪಾಲ ಕಟ್ಟಿಮನಿ, ಬಸ್ಸಪ್ಪ ಮಾದರ ಹಾಗೂ ಶ್ರೀ ಮಾದರ ಚೆನ್ನಯ್ಯ ಸಮಾಜದ ಬಾಂಧವರು ಅಪಾರ ಸಂಖ್ಯೆಯಲ್ಲಿ ಇದ್ದರು.

ವರದಿ ನಜೀರ್ ಚೋರಗಸ್ತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!