ಪೊನ್ನಂಪೇಟೆ :ಕುಟ್ಟದಲ್ಲಿ ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಗರದ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿದ್ದು, ಪ್ರಮುಖ ಆರೋಪಿ ಹಾಗೂ ಹೋಂಸ್ಟೇ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರೆದಿದೆ.
ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ನಡೆದ ಘಟನೆ
ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ, ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯಾಗಿರುವ ವೃಜೇಶ್ ಕುಮಾರ್ನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಹೋಂಸ್ಟೇ ಮಾಲೀಕ ವಿಶಾಲ್ ಮೇಲೂ ಆರೋಪಗಳಿದ್ದು, ಅವರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಹಿನ್ನೆಲೆ ಹಾಗೂ ಆರೋಪಗಳ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ವರದಿ: ಪ್ರಿತುನ್ ಪೂವಣ್ಣ




















