ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡೆಂಗೆ ರೋಗ ಹರಡದಂತೆ ತಡೆಗಟ್ಟಲು ಜಾಗೃತಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಮ್ ಬೀ

ಸಿರುಗುಪ್ಪ – ಬಳ್ಳಾರಿ ಜಿಲ್ಲೆಯಲ್ಲಿ ಡೆಂಗೆ ರೋಗ ಹರಡುವುದನ್ನು ತಡೆಗಟ್ಟಲು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಬಳ್ಳಾರಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ವಿ ಕೆ ಮರಿಯಮ್ ಬೀ ಅವರು ಹೇಳಿದರು. ವಿವಿಧ ಕಡೆ ಮನೆ ಮನೆ ಭೇಟಿ ಮಾತನಾಡಿದ ಅವರು ಲಾರ್ವಾ ಸಮೀಕ್ಷೆ ಮತ್ತು ಸೊಳ್ಳೆ ನಿಯಂತ್ರಣ ಕಾರ್ಯಕ್ರಮಗಳನ್ನು ತೀವ್ರಗೊಳಿಸಲಾಗಿದೆ ಈಡೀಸ್ ಸೊಳ್ಳೆ ಕಚ್ಚಿದ 4 ರಿಂದ 10 ದಿನಗಳಲ್ಲಿ ಹಠಾತ್ ತೀವ್ರ ಜ್ವರ ತೀವ್ರ ತಲೆನೋವು ಕಣ್ಣುಗಳ ಹಿಂಭಾಗದಲ್ಲಿ ನೋವು ಸ್ನಾಯು ಮೂಳೆ ಕೀಲುಗಳಲ್ಲಿ ವಿಪರೀತ ನೋವು ವಾಕರಿಕೆ ವಾಂತಿ ಮತ್ತು ಚರ್ಮದ ಮೇಲೆ ಕೆಂಪು ದದ್ದು ಲಕ್ಷಣಗಳು ಕಾಣಿಸಿಕೊಳ್ಳುತ್ತವೆ ತೀವ್ರ ಹೊಟ್ಟೆ ನೋವು ಮೂಗಿನಿಂದ ರಕ್ತಸ್ರವ ಕಾಣಿಸಿಕೊಂಡಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು ಎಂದು ತಿಳಿಸಿದರು.

ಇಲಾಖೆಯಿಂದ ಕೈಗೊಳ್ಳಲಾದ ಕ್ರಮ :
ಆಶಾ ಕಾರ್ಯಕರ್ತೆಯರು ತಿಂಗಳಿಗೆ ಎರಡು ಬಾರಿ ಪ್ರತಿಯೊಂದು ಮನೆಗೆ ಭೇಟಿ ನೀಡಿ ಸಂಗ್ರಹಿಸಿಟ್ಟ ನೀರಿನ ಪರಿಕರಗಳಲ್ಲಿ ಲಾರ್ವಾ ಸೊಳ್ಳೆ ಮೊಟ್ಟೆ ಇದೆಯೇ ಎಂದು ಪರೀಕ್ಷಿಸುತ್ತಿದ್ದಾರೆ ಬಳ್ಳಾರಿ ನಗರ ಸಿರುಗುಪ್ಪ ಮತ್ತು ಸಂಡೂರು ನಗರ ಪ್ರದೇಶಗಳಲ್ಲಿ ಪ್ರತಿ ಶುಕ್ರವಾರ ಮತ್ತು ಶನಿವಾರದಂದು ವಿಶೇಷ ಸಮೀಕ್ಷೆ ನಡೆಸಿ ಲಾರ್ವಾ ತಾಣಗಳನ್ನು ನಿರ್ಮೂಲನೆ ಮಾಡಲಾಗುತ್ತಿದೆ ಎಂದರು.

ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!