ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೈತರ ಜಾಗೃತಿಗಾಗಿ KRS ಪಕ್ಷದ ರೈತ ಚೈತನ್ಯ ಯಾತ್ರೆ.

ಗಂಗಾವತಿ: ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ರಾಜ್ಯ ರೈತ ಘಟಕದ ವತಿಯಿಂದ ಗಂಗಾವತಿ ತಾಲೂಕಿನಲ್ಲಿ ರೈತರ ಹಕ್ಕುಗಳು ಮತ್ತು ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ “ರೈತ ಚೈತನ್ಯ ಯಾತ್ರೆ” ಎರಡು ದಿನಗಳ ಕಾಲ ಯಶಸ್ವಿಯಾಗಿ ನಡೆಯಿತು.
ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ನಂತರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಯಾತ್ರೆ ಸಾಗುತ್ತಿದ್ದು, ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಲಾಗುತ್ತಿದೆ.

ಈ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ. ಗೋಮರ್ಸಿ ರೈತರ ಸಂಕಷ್ಟಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು,ಬೆಳೆಗಳಿಗೆ ನ್ಯಾಯಸಮ್ಮತ ಬೆಲೆ, ನೀರಾವರಿ ಸೌಲಭ್ಯ, ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಿಸುವುದಾಗಿದೆ. ಯಾತ್ರೆಯ ವೇಳೆ ಕೃಷಿ ಕ್ಷೇತ್ರದ ಸಮಸ್ಯೆಗಳ ಕುರಿತು ವಿವರವಾಗಿ ಚರ್ಚಿಸಲಾಗುತ್ತಿದ್ದು, ರೈತರನ್ನು ಸಂಘಟಿತವಾಗಿ ಹೋರಾಟಕ್ಕೆ ಸಜ್ಜುಗೊಳಿಸಲಾಗುತ್ತಿದೆ.
KRS ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು, ರೈತ ಸಮುದಾಯದಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿಯೂ ಯಾತ್ರೆ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮುಂದುವರಿಯಲಿದೆ.
ಈ ಯಾತ್ರೆಯಲ್ಲಿ ಎಲ್ಲಾ ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿ, ರೈತರ ಹಕ್ಕುಗಳ ಹೋರಾಟವನ್ನು ಬಲಪಡಿಸಲು ಸಹಕರಿಸುವಂತೆ KRS ಪಕ್ಷ ವಿನಂತಿಸಿದರು.

ಇದೇ ಸಂದರ್ಭದಲ್ಲಿ ಕನಕಪ್ಪ ಉಡೆಜಾಲಿ, ಕೊಪ್ಪಳ ಜಿಲ್ಲಾ ಸಂಚಾಲಕರಾದ ಗಣೇಶ್ ಅಮೃತ್, ಮೈನುದ್ದೀನ್, ಗಣೇಶ್ ಸಾರಂಗಿ, ಗಂಗಾವತಿ ತಾಲೂಕು ಅಧ್ಯಕ್ಷರಾದ ಶಾಮೀದ್ ಅಲಿ ಹುಲಿಹೈದರ, ಉಪಾಧ್ಯಕ್ಷರಾದ ನಾಗಪ್ಪ ಕಂಬಳಿ, ಕಾರ್ಯದರ್ಶಿಗಳಾದ ಮುದಿಯಪ್ಪ,ಮೆಹಬೂಬ್, ಬಸವರಾಜ,ಮಹಮ್ಮದ್ ಹುಸೇನ್, ಗಣೇಶ್ ಶಿಂಧೆ ಸೇರಿದಂತೆ ಇತರರು ಭಾಗವಹಿಸಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!