ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಕ್ಷಕ ಅಲ್ತಾಫ್ ಹುಸೇನ್ ಮಕಾನದಾರ ಅವರಿಗೆ ಪಿಎಚ್.ಡಿ ಪದವಿ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಂಡೂರಿನ ಶಿಕ್ಷಕ, ಕೊಪ್ಪಳದ ಅಲ್ತಾಫ್ ಹುಸೇನ್ ಮಕಾನದಾರ ಅವರಿಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ಭೌತಶಾಸ್ತ್ರ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಪ್ರೊ. ಸಂಜೀವ್ ಆರ್. ಇನಾಮದಾರ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘Photophysical Characterization of Nanoparticle Fluorophore Systems” ಎಂಬ ವಿಷಯದ ಕುರಿತು ನಡೆಸಿದ ಸಂಶೋಧನಾ ಮಹಾ ಪ್ರಬಂಧಕ್ಕೆ ವಿಶ್ವವಿದ್ಯಾಲಯದ ಗಾಂಧಿ ಭವನದಲ್ಲಿ ನಿನ್ನೆ ನಡೆದ 75ನೇ ವಾರ್ಷಿಕ ಘಟಿಕೋತ್ಸವದಲ್ಲಿ ಕರ್ನಾಟಕದ ರಾಜ್ಯಪಾಲರಾದ ಮಾನ್ಯ
ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಪಿಎಚ್.ಡಿ ಪದವಿಯನ್ನು ವಿತರಿಸಿದರು.
ಡಾಕ್ಟರೇಟ್ ಪದವಿ ಪಡೆದ ಅಲ್ತಾಫ್ ಹುಸೇನ್ ಮಕಾನದಾರ ಅವರನ್ನು ಗ್ರಂಥಪಾಲಕರಾದ ಪ್ರಕಾಶಗೌಡ ಎಸ್ ಯು, ಸಹ ಪ್ರಾಧ್ಯಾಪಕಾರದ ಪ್ರೊ. ಸುರೇಶ್ ಕುಮಾರ ಸೊನ್ನದ್, ಪ್ರೊ. ಶಂಕ್ರಯ್ಯ ಅಬ್ಬಿಗೇರಿಮಠ, ಪ್ರೊ.ಉಮೇಶ್ ಅಂಗಡಿ, ಡಾ. ಮಹಾಂತೇಶ್ ನೆಲಾಗಣಿ, ಉಪನ್ಯಾಸಕ ಮಹೆಬೂಬ ಪಾಷಾ ಮಕಾನದಾರ ಅಭಿನಂದಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!