ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆಸ್ಪತ್ರೆಯ ಬಾತ್‌ರೂಮ್ ಕಿಟಕಿ ಒಡೆದು ಜೈಲು ಆರೋಪಿ ಪರಾರಿ

ಬಳ್ಳಾರಿ : ಜೈಲಿನಲ್ಲಿದ್ದ ಆರೋಪಿಯೊಬ್ಬನು ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಆಸ್ಪತ್ರೆಯಿಂದ ಪರಾರಿಯಾದ ಘಟನೆ ನಗರದಲ್ಲಿ ಆತಂಕಕ್ಕೆ ಕಾರಣವಾಗಿದೆ.
ಹರಪನಹಳ್ಳಿ ಮೂಲದ ಅಣ್ಣಪ್ಪ ಎಂಬ ಆರೋಪಿ, ಜೈಲಿನೊಳಗಿದ್ದ ವೇಳೆ ಮಧ್ಯಾಹ್ನ ಮರದ ಮೇಲಿಂದ ಬಿದ್ದು ಗಾಯಗೊಂಡಿದ್ದನು. ಗಾಯಗೊಂಡ ವಿಐಎಮ್ಸ್ (VIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಆರೋಪಿ ಬಾತ್‌ರೂಮ್ಗೆ ತೆರಳಿದ ಬಳಿಕ, ಅಲ್ಲಿ ಕಿಟಕಿಯ ಗ್ಲಾಸ್‌ ಒಡೆದು ತಪ್ಪಿಸಿಕೊಂಡಿರುವುದು ತಿಳಿದುಬಂದಿದೆ.

ವಿಭಾಗ-7th ಹಿನ್ನೆಲೆ ಅವರನ್ನು ತಕ್ಷಣವೇ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕೆಲಕಾಲದ ಬಳಿಕ ಘಟನೆ ಬೆಳಕಿಗೆ ಬಂದಿದ್ದು, ಆಸ್ಪತ್ರೆ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಎಚ್ಚೆತ್ತುಕೊಂಡರು.

ಈ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ನಗರದಲ್ಲಿ ವಿವಿಧ ಸ್ಥಳಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಘಟನೆಯ ಹಿನ್ನೆಲೆ ಆಸ್ಪತ್ರೆ ಹಾಗೂ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳು ಎದ್ದಿದ್ದು, ಆರೋಪಿ ಹೇಗೆ ಸುಲಭವಾಗಿ ತಪ್ಪಿಸಿಕೊಳ್ಳಲು ಸಾಧ್ಯವಾಯಿತು ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!