ಸಿರುಗುಪ್ಪ – ತಾಲೂಕಿನಲ್ಲಿ 9ನೇ ಸುತ್ತಿನ ಕಾಲುಬಾಯಿ ರೋಗದ ಉಚಿತ ಲಸಿಕಾ ಅಭಿಯಾನವನ್ನು ಏ. 23 ರಿಂದ ಮೇ 22 ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಪಶು ಸಂಗೋಪನಾ ಇಲಾಖೆಯ ಮುಖ್ಯ ಪಶು ಆಡಳಿತ ವೈದ್ಯಾಧಿಕಾರಿ ಗಂಗಾಧರ ಹೇಳಿದರು. ನಗರದ ಸರ್ಕಾರಿ ನೌಕರರ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಸಿಬ್ಬಂದಿಗೆ ಹಮ್ಮಿಕೊಂಡಿದ್ದ ಜಾನುವಾರುಗಳಿಗೆ ಕಾಲುಬಾಯಿ ರೋಗದ ಲಸಿಕೆ ಹಾಕುವ ಬಗ್ಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಕಾಲುಬಾಯಿ ರೋಗವು ಎತ್ತು ಹೋರಿ ಹಸು ಹಾಗೂ ಎಮ್ಮೆಗಳಲ್ಲಿ ಉಂಟಾದರೆ ಆರ್ಥಿಕ ನಷ್ಟ ಉಂಟಾಗುತ್ತದೆ ರೋಗದಿಂದ ಗುಣಮುಖವಾದ ಜಾನುವಾರುಗಳಿಗೆ ಕಟ್ಟುವಿಕೆಯಲ್ಲಿ ವಿಳಂಬವಾಗುತ್ತದೆ ಜೊತೆಗೆ ಹಾಲಿನ ಇಳುವರಿ ಕಡಿಮೆಯಾಗುವ ಸಾಧ್ಯತೆ ಇದೆ ಎಂದರು. ಮೂರು ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಅಗತ್ಯವಿದೆ ಕಾಲುಬಾಯಿ ಲಸಿಕೆಯನ್ನು ವರ್ಷಕ್ಕೆ ಎರಡು ಬಾರಿ ಹಾಕಲಾಗುತ್ತದೆ ಒಂದು ತಿಂಗಳು ನಡೆಯುವ ಈ ಅಭಿಯಾನದಲ್ಲಿ ಬೆಳಿಗ್ಗೆ 7 ಗಂಟೆಯಿಂದ 10ರವರೆಗೆ ಪಶುಗಳಿಗೆ ಲಸಿಕೆ ಹಾಕಲಾಗುತ್ತದೆ ತಾಲೂಕಿನಲ್ಲಿ ಕಾಲುಬಾಯಿ ಜ್ವರಕ್ಕೆ ಲಸಿಕೆ ನೀಡುವ ತಂಡ ರಚಿಸಲಾಗಿದೆ ಎಂದು ತಿಳಿಸಿದರು ಹಿರಿಯ ಪಶು ಪರೀಕ್ಷಕ ಟಿ ಹುಚ್ಚೀರಪ್ಪ ಮಾತನಾಡಿ ಕಾಲುಬಾಯಿ ರೋಗವು ವೈರಾಣು ವಿನಿಂದ ಹರಡುವ ಸಾಂಕ್ರಾಮಿಕ ರೋಗ ರೈತರಿಗೆ ಆರ್ಥಿಕ ಸಂಕಷ್ಟ ತಂದೊಡ್ಡುವ ಕಾಲು ಬಾಯಿ ರೋಗವನ್ನು ನಿಯಂತ್ರಿಸಿ ನಿರ್ಮೂಲನೆ ಮಾಡಲು ಪ್ರತಿ 6 ತಿಂಗಳಿಗೊಮ್ಮೆ ರೋಗದ ವಿರುದ್ಧ ಲಸಿಕೆ ಹಾಕಿಸುವುದೊಂದೇ ಉತ್ತಮ ಮಾರ್ಗ ಎಂದರು. ರೋಗ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ದಡಿಯಲ್ಲಿ ಕಾಲುಬಾಯಿ ಲಸಿಕೆಯು ಕೇಂದ್ರ ಸರ್ಕಾರದಿಂದ ಸರಬರಾಜಾಗಿದ್ದು ತಪ್ಪದೇ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ ಹಾಕಿಸಿ ರೋಗ ಬರದಂತೆ ಜಾನುವಾರು ರಕ್ಷಿಸಿ ಆರ್ಥಿಕ ನಷ್ಟ ಉಂಟಾಗುವುದನ್ನು ರೈತರು ತಪ್ಪಿಸಬೇಕು ಎಂದರು ಕಿರಿಯ ವೈದ್ಯ ಕುಬೇರ ಪಶು ಸಂಗೋಪನ ಇಲಾಖೆಯ ಅಧಿಕಾರಿಗಳಾದ ರಾಘವೇಂದ್ರ ಶೆಟ್ಟಿ ತಿಪ್ಪೇಸ್ವಾಮಿ ವಿಜಯ ಕಾಂತ ನಾಡಂಗ ರಾಜ ಶ್ರೀನಿವಾಸ್ ಬಾಷಾ ಅಬ್ದುಲ್ ನಬಿ ಪಶು ಸಖಿಯರು ಮೈತ್ರಿ ಕಾರ್ಯಕರ್ತರು ಮತ್ತಿತರರು ಇದ್ದರು.
ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ




















