ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

“ಭಾಷಾ ಕೌಶಲಗಳ ಸಾಮರ್ಥ್ಯವೃದ್ಧಿ” ಕುರಿತ ಒಂದು ವಾರದ ತರಬೇತಿ ಕಾರ್ಯಕ್ರಮ

ಕಲಬುರಗಿ: ಚಾಂದ್ ಬಿ ಬಿ ಮಹಿಳಾ ಶಿಕ್ಷಣ ಮಹಾವಿದ್ಯಾಲಯ, ಕಲಬುರಗಿಯಲ್ಲಿ ಅಜೀಂ ಪ್ರೇಮ್ ಜಿ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಲಾದ “ಭಾಷಾ ಕೌಶಲಗಳ ಸಾಮರ್ಥ್ಯವೃದ್ಧಿ” ಕುರಿತ ಒಂದು ವಾರದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಅದ್ದೂರಿಯಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮಕ್ಕೆ ಕು. ಫೌಝಿಯಾ ಘಜಾಲಾ, ಕು. ಮೋನಿಕಾ ಹಾಗೂ ಕು. ಮಹಾದೇವಿ ಅವರು ಪ್ರಾರ್ಥನಾ ಗೀತೆ ಹಾಡುವ ಮೂಲಕ ಶುಭಾರಂಭ ನೀಡಿದರು.
ಕಾರ್ಯಕ್ರಮವನ್ನು ಖುಸ್ರೋ ಚಾರಿಟೇಬಲ್ ಟ್ರಸ್ಟ್, ಮೊಮಿನಿಪುರದ ಅಧ್ಯಕ್ಷರು ಹಾಗೂ ಕಲಬುರಗಿಯ ಮಾಜಿ ಮಹಾಪೌರರಾದ ಡಾ. ಎಂ.ಡಿ. ಅಶ್ಫಕ್ ಚುಲಬುಲ್ ಅವರು ಉದ್ಘಾಟಿಸಿ ಮಾತನಾಡಿ, “ಭಾಷಾ ಕೌಶಲಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಮಹತ್ವದ ಪಾತ್ರವಹಿಸುತ್ತವೆ. ಉತ್ತಮ ಸಂವಹನ ಕೌಶಲ ಹೊಂದಿದ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಮೆಟ್ಟಿಲುಗಳನ್ನು ಏರಲು ಹೆಚ್ಚು ಸಾಧ್ಯತೆ ಹೊಂದಿರುತ್ತಾರೆ” ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ರುಕ್ಸೀಂದಾ ಹೀನಾ ಅಕಬರಿ ಅವರು ವಹಿಸಿಕೊಂಡು, ಇಂತಹ ತರಬೇತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೃತ್ತಿಪರ ಬೆಳವಣಿಗೆಗೆ ದಾರಿದೀಪವಾಗುತ್ತವೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಅನ್ವರ್ ಜಮಾದಾರ, ಶ್ರೀ ನೂರಂದಪ್ಪ ಪಡಶೆಟ್ಟಿ ಹಾಗೂ ಶ್ರೀಮತಿ ಅಸ್ಮಾ ಮೇಡಂ ಅವರು ಭಾಗವಹಿಸಿ, ಭಾಷಾ ಕೌಶಲಗಳ ಅಭಿವೃದ್ಧಿ, ಪರಿಣಾಮಕಾರಿ ಸಂವಹನ ವಿಧಾನಗಳು ಮತ್ತು ಜೀವನಾಧಾರಿತ ಪ್ರಾಯೋಗಿಕ ಅನುಭವಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಉತ್ಸಾಹದಿಂದ ಭಾಗವಹಿಸಿ, ವಿವಿಧ ಚಟುವಟಿಕೆಗಳಲ್ಲಿ ತೊಡಗಿಕೊಂಡರು. ಈ ತರಬೇತಿ ಶಿಬಿರವು ವಿದ್ಯಾರ್ಥಿನಿಯರಲ್ಲಿ ಆತ್ಮವಿಶ್ವಾಸ, ಆತ್ಮಸ್ಥೈರ್ಯ ಮತ್ತು ಸಂವಹನ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
ಕಾರ್ಯಕ್ರಮದ ಆಯೋಜಕರಾದ ಡಾ. ಶರಬಯ್ಯ ಸ್ವಾಮಿ ಅವರು ಮಾತನಾಡಿ, “ಈ ಒಂದು ವಾರದ ತರಬೇತಿ ಕಾರ್ಯಕ್ರಮವು ವಿದ್ಯಾರ್ಥಿನಿಯರಲ್ಲಿ ಆತ್ಮಸ್ಥೈರ್ಯವನ್ನು ವೃದ್ಧಿಸಿ, ಅವರ ಭವಿಷ್ಯ ರೂಪಿಸಿಕೊಳ್ಳಲು ಪ್ರೇರಣೆ ನೀಡಿದೆ” ಎಂದು ತಿಳಿಸಿದರು. ಅವರು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ದೈಹಿಕ ನಿರ್ದೇಶಕರಾದ ಡಾ. ಮಲ್ಲಿಕಾರ್ಜುನ್ ಡೊಂಣ್ಣೂರು ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ವಿದ್ಯಾರ್ಥಿನಿಯರಾದ ಕುಮಾರಿ ಅಪ್ನಾನ್ ಹುದಾ, ಕು. ರಕ್ಷಿತಾ ಹಾಗೂ ಕು. ಶ್ರದ್ಧಾ ತಮ್ಮ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದ ನಿರೂಪಣೆಯನ್ನು ಫಿರ್ದೋಸ್ ಬೇಗಮ್ ನಿರ್ವಹಿಸಿದರು. ಸ್ವಾಗತವನ್ನು ಕು. ಸಪ್ನಾ ನೆರವೇರಿಸಿದರು. ವಂದನಾರ್ಪಣೆಯನ್ನು ಕು. ಶರಣಮ್ಮ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಉಮಾಕಾಂತಗೌಡ, ಡಾ. ಖಮರ್ ಜಹಾನ್ ದೇವದುರ್ಗ, ಡಾ. ನಿಲೋಫರ್, ಗ್ರಂಥಾಪಾಲಕರಾದ ಡಾ. ಎಂ.ಡಿ. ಅಸ್ಗರ್ ಅಲಿ ಶಮಸ್ತಿ, ಶ್ರೀ ಮಲ್ಲಿಕ್ ರಹಮಾನ್ ಅತ್ತರ್ ಸೇರಿದಂತೆ ಬೋಧಕ ಹಾಗೂ ಭೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

  • ಕರುನಾಡ ಕಂದ ಪತ್ರಿಕೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!