ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹುಬ್ಬಳ್ಳಿ ಸಿದ್ಧಾರೂಢ ಮಠಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ.

ಹುಬ್ಬಳ್ಳಿ: ಶ್ರೀಕ್ಷೇತ್ರ ಸಿದ್ಧಾರೂಢ ಮಠಕ್ಕೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ, ಶ್ರೀಗಳ ಗದ್ದುಗೆಯ ದರ್ಶನ ಪಡೆದು ಆಶೀರ್ವಾದ ಪಡೆದರು. ಭಕ್ತಿಭಾವದಿಂದ ಮಠದ ಪರಂಪರೆಯಂತೆ ವಿಶೇಷ ಪೂಜೆ ಸಲ್ಲಿಸಿದ ಅವರು, ಸಿದ್ಧಾರೂಢರ ಮಠವು ಧಾರ್ಮಿಕತೆಗೆ ಮಾತ್ರ ಸೀಮಿತವಾಗದೇ, ಸಮಾಜದಲ್ಲಿ ಏಕತೆ ಮತ್ತು ಸೌಹಾರ್ದದ ಸಂಕೇತವಾಗಿದೆ ಎಂದು ಅಭಿಪ್ರಾಯಪಟ್ಟರು.
ಅಹಿಂದ ಚಳವಳಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಗೋಕುಲ್ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ‘ಅಹಿಂದ 25 ಹೋರಾಟ – ಸಾಧನೆ ಮತ್ತು ಸಂಕಲ್ಪ’ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ ಬಳಿಕ ಸಚಿವರು ಮಠಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಠದ ಟ್ರಸ್ಟ್ ಸದಸ್ಯರು ಹಾಗೂ ಸ್ಥಳೀಯ ಮುಖಂಡರು ಸಚಿವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವ ಪೂರ್ವಕವಾಗಿ ಸನ್ಮಾನಿಸಿದರು. ಸಚಿವರ ಪುತ್ರ ರಾಹುಲ್ ಜಾರಕಿಹೊಳಿ ಅವರು ಸಹ ತಂದೆಯೊಂದಿಗೆ ಮಠಕ್ಕೆ ಭೇಟಿ ನೀಡಿ, ಶ್ರೀಗಳ ದರ್ಶನ ಪಡೆದು ಆಶೀರ್ವಾದ ಪಡೆದರು. ಅವರನ್ನು ಕೂಡ ಮಠದ ವತಿಯಿಂದ ಸನ್ಮಾನಿಸಲಾಯಿತು.

ಯುವ ನಾಯಕರು ಇಂತಹ ಆಧ್ಯಾತ್ಮಿಕ ಮತ್ತು ಐತಿಹಾಸಿಕ ಕ್ಷೇತ್ರಗಳಿಗೆ ಭೇಟಿ ನೀಡುವುದು ಸಂಸ್ಕೃತಿ ಹಾಗೂ ಪರಂಪರೆಯ ಉಳಿವಿಗೆ ಸಹಕಾರಿ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಸಚಿವರು ಹಾಗೂ ಅವರ ಪುತ್ರರ ಭೇಟಿಯಿಂದ ಮಠದ ಭಕ್ತರು ಮತ್ತು ಕಾರ್ಯಕರ್ತರಲ್ಲಿ ವಿಶೇಷ ಹರ್ಷದ ವಾತಾವರಣ ಕಂಡುಬಂದಿತು.

ವರದಿ ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!