ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಡ್ತಿಯಲ್ಲಿ ಜಾಗರೂಕತೆಯ ಅಭಾವ ಕುರಿತು ಕೆನರಾ ಬ್ಯಾಂಕಿನ ವಿಚಾರಣೆ

ನವದೆಹಲಿ: ವಿಕಲಚೇತನ ಉದ್ಯೋಗಿಗಳ ಮುಂಬಡ್ತಿಯಲ್ಲಿ ಮುಂಜಾಗರೂಕತೆ ವಹಿಸದ ಕೆನರಾ ಬ್ಯಾಂಕ್ ಅಧಿಕಾರಿ ವರ್ಗದ ಧೋರಣೆಯನ್ನು ಖಂಡಿಸಿ ಇಂಡಿಯನ್ ದಿವ್ಯಾಂಗ್ ಎಂಪವರ್ಮೆಂಟ್ ಅಸೋಸಿಯೇಷನ್ ಇದರ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ವಿಕಲಚೇತನರ ಮುಖ್ಯ ಆಯುಕ್ತರ ನ್ಯಾಯಾಲಯದಲ್ಲಿ ದಾಖಲಿಸಿದ ಮೊಕದ್ದಮೆಯಲ್ಲಿ ಮುಖ್ಯ ಆಯುಕ್ತರಾದ ಶ್ರೀ ಗೋವಿಂದರಾಜ್ ಅವರು ವಿಚಾರಣೆ ನಡೆಸಿದರು.

ವಿಚಾರಣೆಯಲ್ಲಿ ವಿಕಲಚೇತನ ಉದ್ಯೋಗಿಯು ಸಮರ್ಪಕ ದಾಖಲೆಗಳನ್ನು ಸಲ್ಲಿಸುವಲ್ಲಿ ಕೆಲವು ಲೋಪದೋಷಗಳಿದ್ದು ಅವುಗಳನ್ನು ಮೂವತ್ತು ದಿವಸದ ಒಳಗೆ ಸಲ್ಲಿಸಬೇಕೆಂದು ನ್ಯಾಯಾಲಯವು ತಾಕೀತು ಮಾಡಿತು.

ಈ ಸಂಧರ್ಭದಲ್ಲಿ ಇಂಡಿಯನ್ ದಿವ್ಯಾಂಗ್ ಎಂಪವರ್ಮೆಂಟ್ ಅಸೋಸಿಯೇಷನ್ ಇದರ ಕಾನೂನು ಸಲಹೆಗಾರರಾದ ಅಡ್ವೋಕೇಟ್ ತನ್ವರ್ ಸವಿತಾ ಹಾಜರಿದ್ದು ತಮ್ಮ ವಾದವನ್ನು ಸಮರ್ಥವಾಗಿ ಮಂಡಿಸಿದರು.

ಈ ಸಂದರ್ಭದಲ್ಲಿ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಹಾಜರಿದ್ದು ಕೋರ್ಟಿನ ಕಾರ್ಯ ಕಲಾಪಗಳನ್ನು ವೀಕ್ಷಿಸಿ ಅಡ್ವೋಕೇಟ್ ತನ್ವರ್ ಸವಿತಾ ಅವರ ಅಮೋಘವಾದ ವೈಖರಿಗೆ ಪ್ರಶಂಸೆ ವ್ಯಕ್ತ ಪಡಿಸಿ ಅವರ ಸಾಮಾಜಿಕ ಸೇವೆಗೆ ಅಭಿನಂದಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!