ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿರುಗುಪ್ಪ : ನಗರ ಸಭೆ ಆಸ್ತಿ ತೆರಿಗೆಯ ಶೇ. 5 ರಷ್ಟು ರಿಯಾಯಿತಿ ನೀಡುವ ಅವಧಿ ವಿಸ್ತರಣೆ – ಪೌರಯುಕ್ತ ಗಂಗಾಧರ

ಸಿರುಗುಪ್ಪ – ಕರ್ನಾಟಕ ಸರ್ಕಾರ ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕರು 2026- 27ನೇ ಸಾಲಿನ ಆರ್ಥಿಕ ವರ್ಷದಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಜಿ ಬಿ ಏ ಹೊರತುಪಡಿಸಿ ಆಸ್ತಿ ತೆರಿಗೆಯ ಶೇ. 5 ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ತೆರಿಗೆ ಪಾವತಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರೋತ್ಸಾಹ ನೀಡಲು ಆಸ್ತಿ ತೆರಿಗೆ ವಸುಲಾತಿಯಲ್ಲಿ ಹೆಚ್ಚಿನ ಪ್ರಗತಿಯನ್ನು ನಿರೀಕ್ಷಿಸ ಬಹುದಾಗಿದ್ದು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆರ್ಥಿಕವಾಗಿ ನೆರವಾಗಬಹುದಾಗಿದೆ ನಗರ ಸಭೆ ವ್ಯಾಪಿಯಲ್ಲಿ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ 2026 – 27ನೇ ಸಾಲಿಗೆ ಮಾತ್ರ ಅನ್ವಯವಾಗುವಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಶೇ. 5 ರ ರಿಯಾಯಿತಿಯ ಕಾಲಾವಧಿಯನ್ನು ಸಾರ್ವಜನಿಕ ಹಿತ ದೃಷ್ಟಿಯಿಂದ ತೆರಿಗೆ ಪಾವತಿಸಲು 31 ಮೇ 2026 ರ ವರೆಗೆ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಶೇ. 5 ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ ಎಂದು ಸಿರಗುಪ್ಪ ನಗರಸಭೆ ಪೌರಯುಕ್ತರಾದ ಗಂಗಾಧರ ಅವರು ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿನಂತಿಸಿಕೊಂಡಿದ್ದಾರೆ.

ವರದಿ : ಮಸೀದಿ,ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!