ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಸ್‍ಎಸ್‍ಎಲ್‍ಸಿ ಟಾಪರ್ ಸೌಜನ್ಯಳಿಗೆ ಕಡಪಟ್ಪಿ ಶಾಲೆಯಿಂದ ಸನ್ಮಾನ

ಹುನಗುಂದ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಈ ಬಾರಿ ರಾಜ್ಯಕ್ಕೆ ಟಾಪರ್ ಆದ ಹುನಗುಂದ ಪಟ್ಟಣದ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಶಾಲೆಯ ವಿದ್ಯಾರ್ಥಿನಿ ಸೌಜನ್ಯ ಬಸವರಾಜ ಕಂದಕೂರ ಅವರನ್ನು ಪಟ್ಟಣದ ಎಸ್.ಎಸ್.ಕಡಪಟ್ಟಿ ಇಂಟರನ್ಯಾಶನಲ್ ಪಬ್ಲಿಕ್ ಸ್ಕೂಲ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಸಂಸ್ಥೆಯ ಮ್ಯಾನೇಜಿಂಗ ಟ್ರಸ್ಟಿ ಬಸವರಾಜ ಎಸ್.ಕಡಪಟ್ಟಿ ಮಾತನಾಡಿ ಸೌಜನ್ಯ ಬಸವರಾಜ ಕಂದಕೂರ ಅವರು ಪೂರ್ವ ಪ್ರಾಥಮಿಕದಿಂದ ೫ ನೇ ತರಗತಿವರೆಗೆ ನಮ್ಮ ಶಾಲೆಯ ವಿದ್ಯಾರ್ಥಿನಿಯಾಗಿದ್ದಳು. ೧೦ನೇ ತರಗತಿಯಲ್ಲಿ ೬೨೫ ಕ್ಕೆ ೬೨೫ ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿಯ ಶ್ರದ್ಧೆ, ಪರಿಶ್ರಮ, ಪಾಲಕರ ಹಾಗೂ ಶಿಕ್ಷಕರ ಮಾರ್ಗದರ್ಶನದಿಂದ ಈ ಯಶಸ್ಸು ಸಾದ್ಯವಾಗಿದೆ. ಇದು ನಮ್ಮ ಶಾಲೆಗೆ ಮತ್ತು ಪೋಷಕರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಹರ್ಷ ವ್ಯಕ್ತಪಡಿಸುವುದರ ಜೊತೆಗೆ ವಿದ್ಯಾರ್ಥಿನಿಯ ಈ ಸಾಧನೆಯು ಮುಂದಿನ ದಿನಗಳಲ್ಲಿ ಶಾಲೆಯ ಇತರೆ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲಿದೆ ಎಂದರು.

ಸನ್ಮಾನ ಸಮಾರಂಭದಲ್ಲಿ ಚೇರಮನರಾದ ಲತಾ ಬಸವರಾಜ ಕಡಪಟ್ಟಿ, ಶಾಲೆಯ ಆಡಳಿತ ಮಂಡಳಿಯ ಸದಸ್ಯರು,ಪ್ರಾಚಾರ್ಯ,ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿನಿಯ ಪೋಷಕರು ಉಪಸ್ಥಿತರಿದ್ದು.ಸಾಧಕ ವಿದ್ಯಾರ್ಥಿನಿಯನ್ನು ಅಭಿನಂದಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!