ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮೂರು ರಾಜ್ಯದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನಲೆ ಕಂಪ್ಲಿಯಲ್ಲಿ ವಿಜಯೋತ್ಸವ ಆಚರಣೆ

ಬಳ್ಳಾರಿ / ಕಂಪ್ಲಿ : ದೇಶದ ಮೂರು ರಾಜ್ಯದ ಚುನಾವಣೆಯಲ್ಲಿ ಬಿಜೆಪಿ ಬಹುಮತದೊಂದಿಗೆ ಗೆಲುವು ಸಾಧಿಸಿದ ಹಿನ್ನಲೆ ಕಂಪ್ಲಿ ತಾಲೂಕಿನ ಬಿಜೆಪಿ ಮುಖಂಡರು, ಕಾರ್ಯಕರ್ತರು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಸೋಮವಾರ ಮಾಡಿದರು.
ಬಿಜೆಪಿ ಗೆಲುವಿನ ಹಿನ್ನಲೆ ಕಂಪ್ಲಿ ಪಟ್ಟಣದ ಕೊಟ್ಟಾಲ್ ರಸ್ತೆಯಲ್ಲಿರುವ ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಅವರ ನಿವಾಸ ತುಂಗಭದ್ರಾ ನಿಲಯದ ಬಿಜೆಪಿ ಪಾರ್ಟಿ ಕಛೇರಿಯಿಂದ ಬೈಕ್ ರ‍್ಯಾಲಿ ಆರಂಭಿಸಿ, ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿ, ಅಂಬೇಡ್ಕರ್ ವೃತ್ತದಲ್ಲಿ ಸಮಾಹಿಸಿ, ವಿಜಯೋತ್ಸವ ಅದ್ಧೂರಿಯಾಗಿ ಆಚರಿಸಿದರು.
ನಂತರ ಕಂಪ್ಲಿ ವಿಧಾನಸಭಾ ಕ್ಷೇತ್ರದ ಜನತಾ ಪಾರ್ಟಿಯ ಬಿಎಲ್‌ಎ1 ಜಿ.ಶ್ರೀನಿವಾಸ ಮಾತನಾಡಿ, ಪಶ್ಚಿಮ ಬಂಗಾಳ, ಪುದುಚೇರಿ, ಅಸ್ಸಾಂ ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಪಕ್ಷವೂ ಗೆಲುವಿನ ನಗೆ ಬೀರಿದೆ. ವಿಶ್ವ ನಾಯಕನೆಂದೇ ಪ್ರಸಿದ್ಧಿ ಪಡೆದಿರುವ ನರೇಂದ್ರ ಮೋದಿಜೀ ರವರ ಜನಪರ ಅಭಿವೃದ್ಧಿ ಕಾರ್ಯ ಮತ್ತು ಯೋಜನೆಗಳನ್ನು ಮೆಚ್ಚಿ, ಮೂರು ರಾಜ್ಯದ ಮತಬಾಂಧವರು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ರಾಜ್ಯಗಳ ಚುಕ್ಕಾಣಿಗೆ ಅನುವು ಮಾಡಿಕೊಟ್ಟಿದ್ದಾರೆ. ಇದರಿಂದ ವಿರೋಧ ಪಕ್ಷದವರು ಮೂಲೆ ಗುಂಪಾಗಿದ್ದಾರೆ. ಮುಂದಿನ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ, ಮುಖಂಡರಾದ ಡಾ.ವಿ.ಎಲ್.ಬಾಬು, ರಾಮಾಂಜಿನೇಯ, ಶ್ರೀನಿವಾಸ, ಕೆ.ಭಾಸ್ಕರ್‌ರೆಡ್ಡಿ, ಯಣ್ಣಿ ವೆಂಕಟೇಶ, ಟಿ.ವಿ.ಸುದರ್ಶನರೆಡ್ಡಿ, ಪ್ರಶಾಂತ, ಕಾರ್ತಿಕ ಚೇತನ್, ಪಾಲಾಕ್ಷಿ ಸೇರಿದಂತೆ ಕಾರ್ಯಕರ್ತರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!