ಕುಶಾಲನಗರ : ಗುಡ್ಡೆಹೊಸೂರಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಈ ಪ್ರತಿಭಟನೆಯಲ್ಲಿ, ಜಿಲ್ಲೆಯಲ್ಲಿ ಮಿತಿಮೀರಿರುವ ಆನೆ-ಮಾನವ ಸಂಘರ್ಷ ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಸಿ ಅಂಡ್ ಡಿ ಜಮೀನು ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಸಚಿವರ ವಾಹನ ತಡೆಯಲು ಪ್ರಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಸ್ಥಳದಿಂದ ತೆರವುಗೊಳಿಸಿದರು.
ವರದಿ: ಪ್ರಿತುನ್ ಪೂವಣ್ಣ




















