ಬಳ್ಳಾರಿ / ಕಂಪ್ಲಿ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಮ್ಮಿಗನೂರು ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಬಿ.ನೀಲಾವತಿ, ಮರು ಮೌಲ್ಯ ಮಾಪನದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ನಾಲ್ಕು ಅಂಕ ಹೆಚ್ಚು ಗಳಿಸಿ(98) ಶೇ.97.16 ಫಲಿತಾಂಶದೊಂದಿಗೆ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಈ ಕುರಿತು ವಿದ್ಯಾರ್ಥಿನಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ಕಾಲೇಜು ಪ್ರಾಚಾರ್ಯ ವೀರೇಶ್ ಕೆ.ಬಿ. ತಿಳಿಸಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್




















