ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯಡಿಯೂರಪ್ಪ ಅವರ ಅಭಿಮಾನೋತ್ಸವದಲ್ಲಿ ಭಾಗವಹಿಸಲು ಮೂರು ಉಚಿತ ಬಸ್ ವ್ಯವಸ್ಥೆ : ತಾಲೂಕು ಅಧ್ಯಕ್ಷ ಎಸ್.ಎಂ.ನಾಗರಾಜಸ್ವಾಮಿ

ಬಳ್ಳಾರಿ / ಕಂಪ್ಲಿ : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರಿಗೆ ಚಿತ್ರದುರ್ಗದಲ್ಲಿ ಮೇ.9ರಂದು ಅಭಿಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಂಪ್ಲಿ‌ ತಾಲೂಕು ಸೇರಿದಂತೆ ಜಿಲ್ಲೆಯ ವೀರಶೈವ ಲಿಂಗಾಯತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ವೀರಶೈವ ಸಂಘದ ತಾಲ್ಲೂಕು ಅಧ್ಯಕ್ಷ ಎಸ್.ಎಂ. ನಾಗರಾಜಸ್ವಾಮಿ ಮನವಿ ಮಾಡಿದರು.
ಅವರು ಪಟ್ಟಣದ ಶಾರದಾ ಶಾಲೆಯ ವೀರಶೈವ ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನಪರ ಸೇವೆಗಾಗಿ ಇಡೀ ಜೀವನವನ್ನೇ ಮಾನ್ಯ ಯಡಿಯೂರಪ್ಪ ಅವರು ಮುಡುಪಾಗಿಟ್ಟಿದ್ದಾರೆ. ಆದ್ದರಿಂದ ಇವರ ಜನ್ಮದಿನದ ಅಂಗವಾಗಿ ಚಿತ್ರದುರ್ಗದಲ್ಲಿ ಅಭಿಮಾನೋತ್ಸವ ನಡೆಯಲಿದ್ದು, ಆ ಕಾರ್ಯಕ್ರಮಕ್ಕೆ ತೆರಳಲು ಕಂಪ್ಲಿ ಪಟ್ಟಣದ ಶಾರದಾ ಶಾಲೆ ಆವರಣದಿಂದ ಮೇ.9ರ ಬೆಳಿಗ್ಗೆ 7ಕ್ಕೆ ಚಿತ್ರದುರ್ಗಕ್ಕೆ ಮೂರು ಉಚಿತ ಬಸ್ ವ್ಯವಸ್ಥೆ ಜೊತೆಗೆ ಉಪಹಾರ ವ್ಯವಸ್ಥೆ ಮಾಡಲಾಗಿದೆ. ಆದ್ದರಿಂದ ಅಭಿಮಾನೊತ್ಸವದಲ್ಲಿ ಪಾಲ್ಗೊಳ್ಳುವ ಆಸಕ್ತ ವೀರಶೈವ ಲಿಂಗಾಯತರು ಮೊ-ಎಲಿಗಾರ ವೆಂಕಟ ರೆಡ್ಡಿ(ಮೊ.ನಂ-98801 02196), ಎಚ್.ಎಸ್. ವೀರೇಶ್(ಮೊ.ನಂ+70193 53636) ಇವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸುವಂತೆ ತಿಳಿಸಿದ್ದಾರೆ.
ಈ ಸಭೆಯಲ್ಲಿ ಮುಖಂಡರಾದ ಕೆ.ಎಂ. ಹೇಮಯ್ಯಸ್ವಾಮಿ, ಶಿವಪುತ್ರಪ್ಪ ಹೊನ್ನಳ್ಳಿ, ಇಟಗಿ ಬಸವ ರಾಜಗೌಡ, ಅಳ್ಳಳ್ಳಿ ವೀರೇಶ, ವಾಗೀಶ ಪಂಡಿತಾರಾಧ್ಯ, ಪುಟ್ಟಿ ಸಚಿನ್, ರೇಣುಕ ಯ್ಯಸ್ವಾಮಿ, ಸಂಘದ ಪದಾಧಿಕಾರಿಗಳು, ಸಮುದಾಯದವರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!