ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಿಇಡಿ ಮತ್ತು ಟಿಇಟಿ ಪ್ರಮಾಣ ಪತ್ರ ಪಡೆದುಕೊಂಡ ನಿರುದ್ಯೋಗಿಗಳಿಗೆ ನೇಮಕಾತಿಯ ಸೂಚನೆ ಹೊರಡಿಸಬೇಕೆಂದು ಶಾಸಕರಿಗೆ ಮನವಿ

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲೂಕಿನ ಶಾಸಕರ ಕಚೇರಿಯಲ್ಲಿ ಪಿ ಎಸ್ ಟಿ ಆರ್ ಹಿರಿಯ ಪ್ರಾಥಮಿಕ ವಿಭಾಗ ಹುದ್ದೆಗಳ ಆಕಾಂಕ್ಷಿಗಳಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇಮಕಾತಿ ಕೈಗೊಳ್ಳುವಂತೆ ಶಾಸಕ ಜೆ.ಎನ್. ಗಣೇಶ್ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.
ಶಿಕ್ಷಕ ಎಸ್.ರಾಮಪ್ಪ ಮತ್ತು ಲಿಂಗರೆಡ್ಡಿ ಮಾತನಾಡಿ, ಕಲ್ಯಾಣ ಕರ್ನಾಟಕದ ಭಾಗಕ್ಕೆ ಈಗಾಗಲೇ 5267 ಹುದ್ದೆಗಳಿಗೆ ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರೆತಿದ್ದು, ವಿಳಂಬ ಮಾಡದೆ ಶೀಘ್ರವಾಗಿ ಅಧಿಸೂಚನೆ ಹೊರಡಿಸಬೇಕು. ಅಲ್ಲದೆ ಆ ಹುದ್ದೆಗಳನ್ನು ಯಾವುದೇ ಕಾರಣಕ್ಕೂ ಜಿಪಿಟಿ ಮತ್ತು ಪ್ರೌಢಶಾಲಾ ವಿಭಾಗಕ್ಕೆ ವರ್ಗಾಯಿಸದೆ ಕಲ್ಯಾಣ ಕರ್ನಾಟಕ ಭಾಗದ ಡಿಇಡಿ ಮತ್ತು ಟಿಇಟಿ ಪ್ರಮಾಣ ಪತ್ರ ಪಡೆದುಕೊಂಡು ಉದ್ಯೋಗಕ್ಕಾಗಿ ಜಾತಕ ಪಕ್ಷಗಳಿಂದ ಕಾಯುತ್ತಿದ್ದಾರೆ. ಆ ನಿಟ್ಟಿನಲ್ಲಿ ಕೂಡಲೆ ನೇಮಕಾತಿಯ ಸೂಚನೆ ಹೊರಡಿಸಿ ಹುದ್ದೆಗಳ ಆಕಾಂಕ್ಷಿಗಳಿಗೆ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಶಾಸಕರು ಶಿಕ್ಷಣ ಇಲಾಖೆ ಆಯುಕ್ತರಾದ ಕಲ್ಯಾಣ ಕರ್ನಾಟಕ ಭಾಗದ ಪ್ರಿಯಾಂಕ ಖರ್ಗೆ ಸಚಿವರ ಗಮನಕ್ಕೆ ತಂದು ನ್ಯಾಯ ಕೊಡಬೇಕೆಂದು ಒತ್ತಾಯಿಸಿದರು.
ಶಾಸಕ ಜೆ.ಎನ್.ಗಣೇಶ್ ಪ್ರತಿಕ್ರಿಯಿಸಿ ಮಾತನಾಡಿ, ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವಂತೆ ಬಹಳಷ್ಟು ಶಿಕ್ಷಕರು ಒತ್ತಾಯಿಸುತ್ತಿದ್ದು, ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು, ಕೂಡಲೇ ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ನ್ಯಾಯ ಒದಗಿಸಿಕೊಡುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಗೋಪಾಲ, ಎಸ್.ರಾಮು, ಮುದುಕಪ್ಪ, ಶರಣ, ಆಂಜನೇಯ, ಮೋದಿನಸಾಬ್, ರಾಮಚಂದ್ರ, ಮೌನೇಶ, ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!