ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಇಂಧನ ಇಲಾಖೆಯ ಎಲ್ಲಾ ಎಸ್ಕಾಂಗಳ ಲೈನ್ ಮ್ಯಾನ್ ಗಳು ಕಡ್ಡಾಯ ಸಮವಸ್ತ್ರ, ಗುರುತಿನ ಚೀಟಿ ಧರಿಸಲು ಆದೇಶ

ಬೆಂಗಳೂರು : ಇಂಧನ ಇಲಾಖೆ ವ್ಯಾಪ್ತಿಯಲ್ಲಿನ ಎಲ್ಲಾ ನಿಗಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಲ್ ಕಲೆಕ್ಟರ್, ಮೀಟರ್ ರೀಡರ್, ಲೈನ್ ಮ್ಯಾನ್‌ಗಳು ಕರ್ತವ್ಯದ ಸಮಯದಲ್ಲಿ ಕಡ್ಡಾಯವಾಗಿ ಸಮವಸ್ತ್ರ ಮತ್ತು ಸರ್ಕಾರದ ಗುರುತಿನ ಚೀಟಿಯನ್ನು ಧರಿಸುವಂತೆ ಹಾಗೂ ನಕಲಿ ಸಿಬ್ಬಂದಿಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪನವರು ಇಂಧನ ಸಚಿವರಿಗೆ ಪತ್ರ ಬರೆದ ನಿಮಿತ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಇತ್ತಿಚ್ಚೆಗೆ ಹುಬ್ಬಳ್ಳಿಯ ಆನಂದನಗರದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ಸಮವಸ್ತ್ರ ಧರಿಸಿ ಇಂಧನ ಇಲಾಖೆಯ ಬಿಲ್ ಕಲೆಕ್ಟರ್ ಎಂದು ಸಾರ್ವಜನಿಕರ ಮನೆಗಳಿಗೆ ತೆರಳಿ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಪತ್ತೆಹಚ್ಚಿ ಪೊಲೀಸ್‌ರ ವಶಕ್ಕೆ ನೀಡಿದ ಘಟನೆಯೊಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಪತ್ರಿಕೆಯಲ್ಲಿ ವರದಿಯಾಗಿದ್ದು ರಾಜ್ಯದ ಇಂಧನ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕೆಳಸಿಬ್ಬಂದಿ ಮೀಟರ್ ರೀಡರ್, ಬಿಲ್ ಕಲೆಕ್ಟರ್, ಲೈನ್‌ ಮ್ಯಾನ್‌ಗಳನ್ನೂ ಕಂಡು ಭಯಭೀತರಾದ ಜನ ಅಧಿಕೃತ ಸಿಬ್ಬಂದಿಗಳನ್ನು ಕಂಡರು ಅನುಮಾನ ಪಡುವಸ್ಥಿತಿ ಎದುರಾಗಿರುವುದರಿಂದ ಇಂಧನ ಇಲಾಖೆ ವ್ಯಾಪ್ತಿಯಲ್ಲಿ ಬರುವ ಬೆಸ್ಕಾಂ, ಸೆಸ್ಕ್, ಮೆಸ್ಕಾಂ, ಹೆಸ್ಕಾಂ, ಜೆಸ್ಕಾಂಗಳಲ್ಲಿ ಸೇರಿದಂತೆ ಎಲ್ಲಾ ನಿಗಮ/ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಸಿಬ್ಬಂದಿಗಳು ತಮ್ಮ ಕರ್ತವ್ಯದ ಸಮಯದಲ್ಲಿ ಗ್ರಾಹಕರ/ಸಾರ್ವಜನಿಕರ ಮನೆಗೆ ಕಾರ್ಯನಿಮಿತ್ಯ ತೆರಳುವಾಗ ಶುಭ್ರವಾಗಿ ತಲೆ ಕೂದಲು ಮತ್ತು ಗಡ್ಡಗಳನ್ನು ಚೊಕ್ಕವಾಗಿ ಮಾಡಿಸಿಕೊಂಡು ಇಲಾಖೆಯ ಸಮವಸ್ತ್ರಗಳನ್ನು ಹಾಗೂ ಇಲಾಖೆ ನೀಡಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಿಕೊಳ್ಳುವಂತೆ ಹಾಗೂ ನಕಲಿ ಬಿಲ್ ಕಲೆಕ್ಟರ್,ಮೀಟರ್ ರೀಡರ್, ಲೈನ್ ಮ್ಯಾನ್‌ ಗಳ ಹಾವಳಿಯಿಂದ ಬೇಸತ್ತು ಭಯಬೀತರಾದ ಸಾರ್ವಜನಿಕರಿಗೆ/ಗ್ರಾಹಕರಿಗೆ ಆಂತಕದಿಂದ ಹೊರತರಲು ಆಯಾ ನಿಗಮದ ಪ್ರತಿ ಕಛೇರಿ ವ್ಯಾಪ್ತಿಯಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ, ಎಫ್‌ ಎಂ, ರೇಡಿಯೋ, ಸ್ಥಳೀಯ ಹಾಗೂ ಇತರೆ ಟಿವಿ ಮಾಧ್ಯಮಗಳಲ್ಲಿ, ಪತ್ರಿಕಾ ಮಾಧ್ಯಮಗಳಲ್ಲಿ ಪ್ರಕಟಣೆ ಹೊರಡಿಸಿ ಪರಿಣಾಮಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವಂತೆ ಎಲ್ಲಾ ನಿಗಮ/ಸಂಸ್ಥೆಗಳಿಗೆ ಸೂಕ್ತ ಆದೇಶ ನೀಡುವಂತೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪನವರು ಇಂಧನ ಸಚಿವರಿಗೆ ಪತ್ರ ಬರೆದಿದ್ದರನ್ವಯ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಎಸ್ಕಾಂಗಳಿಗೆ ಆದೇಶ ಹೊರಡಿಸಲಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!