ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಮ ಸಮಾಜದ ನಿರ್ಮಾಣಕ್ಕಾಗಿ ಜನಜಾಗೃತಿ ಕಾರ್ಯಕ್ರಮ;ಶಿಕ್ಷಣದಿಂದ ಮಾತ್ರ ಸಮಾಜವನ್ನು ಬದಲಾಯಿಸಬಹುದು; ಶಾಸಕ‌‌ ಡಾ.ಮಂತರ್ ಗೌಡ ಕಿವಿಮಾತು

ಶನಿವಾರಸಂತೆ :ಬಾಬಾ ಸಾಹೇಬ್ ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ, ವಿದ್ಯಾವಂತರಿಗೆ ಮಾಡಿಕೊಟ್ಟಿರುವ ಅವಕಾಶದಿಂದ ನಾವಿಂದು ಸಮಾಜದಲ್ಲಿ ಗೌರವ ಸಂಪಾದಿಸುತ್ತಿದ್ದೇವೆ ಎಂದು ಮಡಿಕೇರಿ ಶಾಸಕ ಡಾ.ಬಿ.ಆರ್.ಅಂಬೇಡ್ಕರ್ ಅಭಿಪ್ರಾಯಪಟ್ಟರು. ಅವರು ಸಮಿಪದ ಮಾದ್ರೆ ಗ್ರಾಮದ ಡಾ.ಭೀಮ್‌ರಾವ್ ಯುವಕ ಸಂಘ ಹಾಗೂ ಗ್ರಾಮಾಭಿವೃದ್ದಿ ಸಮಿತಿ ವತಿಯಿಂದ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಮ ಸಮಾಜದ ನಿರ್ಮಾಣಕ್ಕಾಗಿ ಜನಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಸಮಾಜದಲ್ಲಿ ಸ್ಥಾನಮಾನದಲ್ಲಿರುವರಿಗೆ, ಜನರು ಆರಿಸಿದ ಜನಪ್ರತಿನಿಧಿಗಳಿಗೆ ಜನರು ಗೌರವ ಕೊಡುವುದು ಕೇವಲ ಅವರ ಹುದ್ದೆಗೆ ಅಲ್ಲ ಬದಲಿಗೆ ಅವರು ಪಡೆದುಕೊಂಡಿರುವ ಶಿಕ್ಷಣಕ್ಕೆ ಎಂಬುವುದನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಅವರು ಸಂವಿಧಾನದಲ್ಲಿ ಮಾಡಿಕೊಟ್ಟಿರುವ ಅವಕಾಶದಲ್ಲಿ ಸ್ಥಾನಮಾನ, ಹುದ್ದೆ ಅಧಿಕಾರ ಒಂದು ಭಾಗವಾದರೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯುವುದು ಮತ್ತೊಂದು ಭಾಗವಾಗಿದೆ ಎಂಬುವುದನ್ನು ತಿಳಿಸಿಕೊಟ್ಟಿದ್ದಾರೆ ಈ ದಿಸೆಯಲ್ಲಿ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವುದನ್ನು ಆಸ್ತಿಯನ್ನಾಗಿ ಮಾಡಬೇಕು ಶಿಕ್ಷಣದಿಂದ ಮಾತ್ರ ಸಮಾಜವನ್ನು ಬದಲಾಯಿಸಬಹುದು ಎಂದು ಹೇಳಿದರು. ಪ್ರತಿಯೊಬ್ಬರು ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಮೂಲಕ ಸಮಾಜದ ಅಭಿವೃದ್ದಿ ಕಾರ್ಯದಲ್ಲಿ ಕೈಜೋಡಿಸಬೇಕು ಈ ಭಾಗದಲ್ಲಿ ಮತ್ತಷ್ಟು ಗ್ರಾಮೀಣ ರಸ್ತೆ ಅಭಿವೃದ್ದಿ ಕಾರ್ಯ ಆಗಬೇಕಾಗಿದ್ದು ಈ ಬಗ್ಗೆ ಚಿಂತನೆ ಹರಿಸಲಾಗುವುದು ಎಂದು ಹೇಳಿದರು.

ಮಾಜಿ ತಾ.ಪಂ.ಸದಸ್ಯ ಜೆ.ಆರ್.ಪಾಲಾಕ್ಷ, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಜನಾರ್ಧನ್ ಮಾತನಾಡಿದರು. ವೇದಿಕೆಯಲ್ಲಿ ದುಂಡಳ್ಳಿ ಗ್ರಾ.ಪಂ.ಮಾಜಿ ಅಧ್ಯಕ್ಷ ಅಬ್ಬಾಸ್, ಮಾದ್ರೆ ಜಯ್ ಭೀಮ್ ರಾವ್ ಯುವಕ ಸಂಘದ ಅಧ್ಯಕ್ಷ ಎಂ.ಕೆ.ಮಂಜುನಾಥ್, ಜಯಪ್ಪ ಹಾನಗಲ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಂ.ಎಸ್.ವೀರೇಂದ್ರ ಮುಂತಾದವರು ಉಪಸ್ಥಿತರಿದ್ದರು.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!