ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ

ಬಳ್ಳಾರಿ : ಜಿಲ್ಲೆಯಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ, ಸರ್ಕಾರೇತರ ಹಾಗೂ ಅನುದಾನಿತ ವಸತಿ ನಿಲಯಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸೂಚನೆ ನೀಡಿದ್ದಾರೆ.

’06 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ವಿವಿಧ ಇಲಾಖೆಗಳಡಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳ ಕಾರ್ಯ ವಿಧಾನಗಳ ಮಾರ್ಗಸೂಚಿಗಳು-2025′ ಅನ್ನು ಜಾರಿಗೆ ತರಲು ಸರ್ಕಾರ ಆದೇಶಿಸಿದೆ. ಈ ಪ್ರಕಟಣೆ ಹೊರಡಿಸಿದ ದಿನದಿಂದ 2 ತಿಂಗಳೊಳಗೆ ಎಲ್ಲಾ ವಸತಿ ನಿಲಯಗಳು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರಿ ವಸತಿ ನಿಲಯಗಳು ಆಯಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಬೇಕು. ಸರ್ಕಾರೇತರ ಮತ್ತು ಅನುದಾನಿತ ವಸತಿ ನಿಲಯಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ಅರ್ಜಿ ಸಲ್ಲಿಸಬೇಕು. ಮಾರ್ಗಸೂಚಿ-2025 ರಲ್ಲಿ ನೀಡಲಾಗಿರುವ ‘ನಮೂನೆ-1’ ರಲ್ಲಿ ಅರ್ಜಿಯನ್ನು ಸಲ್ಲಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ನಗರದ ಕಂಟೋನ್‌ಮೆಂಟ್ ನ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಚೇರಿ (ದೂ.08392-241373) ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!