ತುಮಕೂರು : ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಪ್ರೋತ್ಸಾಹ ಧನ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಆಶಾ ಕಾರ್ಯಕರ್ತೆಯರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಮೂರ್ನಾಲ್ಕು ತಿಂಗಳಿಂದ ಪ್ರೋತ್ಸಾಹ ಧನ ಮತ್ತು ಸಂಬಳ ಎರಡನ್ನೂ ಕೊಡುತ್ತಿಲ್ಲ ಎಂದು ಡಿ.ಸಿ ಕಛೇರಿ ಮುಂಭಾಗದಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಧಿಕ್ಕಾರ ಎಂದು ನೂರಾರು ಮಂದಿ ಜಿಲ್ಲೆಯ ವಿವಿಧ ಭಾಗಗಳಿಂದ ಬಂದ ಆಶಾ ಕಾರ್ಯಕರ್ತೆಯರು ಕೆಲಸಕ್ಕೆ ತಕ್ಕಂತೆ ಸಂಬಳ ಕೊಡುತ್ತಿಲ್ಲ ನಾವು ಬಿಸಿಲಲ್ಲಿ ಅಲ್ಲಿ ಇಲ್ಲಿ ಸುತ್ತಿ ಎಲ್ಲಾ ಕೆಲಸವನ್ನು ಮಾಡಬೇಕು ಅದಕ್ಕೆ ತಕ್ಕಂತೆ ಸಂಬಳ ನೀಡುತ್ತಿಲ್ಲ ತಿಂಗಳಿಗೆ 10,000 ಸಂಬಳ ಹಾಗೂ ಪ್ರೋತ್ಸಾಹ ಧನ ನೀಡಬೇಕು ಎಂದು ಸಿದ್ದರಾಮಯ್ಯನವರ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.
ವರದಿ ಲಕ್ಷ್ಮಿ ತುಮಕೂರು




















