ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯುವಕರಿಗೆ ಗುಣಮಟ್ಟದ ಶಿಕ್ಷಣವೇ ಭವ್ಯ ಭಾರತದ ಅಡಿಪಾಯ: ಶಾಸಕ ಲಕ್ಷ್ಮಣ ಸವದಿ

ಬೆಳಗಾವಿ/ಅಥಣಿ: “ಬಲಿಷ್ಠ ಭಾರತ ನಿರ್ಮಾಣಕ್ಕೆ ಗುಣಮಟ್ಟದ ಶಿಕ್ಷಣವೇ ಅಡಿಪಾಯ. ಗ್ರಾಮೀಣ ಹಾಗೂ ಬಡ ಕುಟುಂಬಗಳ ಮಕ್ಕಳಿಗೂ ಉನ್ನತ ಶಿಕ್ಷಣ ಕೈಗೆಟುಕುವಂತಾಗಬೇಕು ಎಂಬ ಉದ್ದೇಶದಿಂದ ಅಥಣಿ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ,” ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವಾರ್ಷಿಕ ಸ್ನೇಹ ಸಮ್ಮೇಳನ, ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಕಾಲೇಜಿನ ಬೆಳವಣಿಗೆಗೆ ಸಂತಸ ವ್ಯಕ್ತಪಡಿಸಿದರು.

“ಒಮ್ಮೆ ನೂರಕ್ಕೂ ಕಡಿಮೆ ವಿದ್ಯಾರ್ಥಿಗಳಿದ್ದ ಈ ಕಾಲೇಜು ಇಂದು ಎರಡು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳೊಂದಿಗೆ ರಾಜ್ಯದ ಗಮನ ಸೆಳೆದಿದೆ. ರಾಜ್ಯದಲ್ಲೇ ಮಾದರಿ ಕಾಲೇಜಾಗಿ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಷಯ. ಇಲ್ಲಿನ ವಿದ್ಯಾರ್ಥಿಗಳು ಶಿಕ್ಷಣ, ಕ್ರೀಡೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡುತ್ತಿರುವುದು ಕ್ಷೇತ್ರದ ಶೈಕ್ಷಣಿಕ ಮಟ್ಟವನ್ನು ತೋರಿಸುತ್ತದೆ,” ಎಂದು ಹೇಳಿದರು.

ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಾರ್ಥನಾ ಬಿರಾದಾರ ಹಾಗೂ ಐಎಫ್‌ಎಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದ ರ್ಯಾಂಕ್ ಪಡೆದ ಬಸವರಾಜ್ ಅವರ ಸಾಧನೆಯನ್ನು ಸ್ಮರಿಸಿದ ಶಾಸಕರು, “ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಪ್ರತಿಭೆ ದೇಶದ ಮಟ್ಟದಲ್ಲಿ ಮಿಂಚುತ್ತಿದೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಥಣಿ ಕ್ಷೇತ್ರದಲ್ಲಿ ನಡೆದಿರುವ ಶೈಕ್ಷಣಿಕ ಅಭಿವೃದ್ಧಿ ಕುರಿತು ವಿವರಿಸಿದ ಅವರು, “ಅಥಣಿ, ತೇಲಸಂಗ ಹಾಗೂ ಕೋಕಟನೂರಿನಲ್ಲಿ ಪದವಿ ಕಾಲೇಜುಗಳು, 11 ಪ್ರೌಢಶಾಲೆಗಳು ಹಾಗೂ ಹೊಸ ಪಿಯು ಕಾಲೇಜುಗಳನ್ನು ಆರಂಭಿಸಲಾಗಿದೆ. ಜೊತೆಗೆ ಕೆಪಿಎಸ್ ಮಾದರಿ ಶಾಲೆಗಳು ಮತ್ತು ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಪಶುವೈದ್ಯಕೀಯ ಕಾಲೇಜು ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದು, ಕೃಷಿ ಕಾಲೇಜು ಹಾಗೂ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೂ ಕ್ರಮ ಕೈಗೊಳ್ಳಲಾಗಿದೆ,” ಎಂದರು.

ಈ ಸಂದರ್ಭದಲ್ಲಿ ಪ್ರೊ. ರಾಜು ಭಜಂತ್ರಿ ಸಂಪಾದಕತ್ವದ ‘ಜ್ಞಾನ ದೀಪ’ ಸ್ಮರಣ ಸಂಚಿಕೆಯನ್ನು ಲಕ್ಷ್ಮಣ ಸವದಿ ಬಿಡುಗಡೆಗೊಳಿಸಿದರು.
ತಹಸೀಲ್ದಾರ್ ಸಿದ್ರಾಯಿ ಬೋಸಗಿ ಮಾತನಾಡಿ, “ವಿದ್ಯಾರ್ಥಿಗಳು ದೊರೆಯುತ್ತಿರುವ ಶೈಕ್ಷಣಿಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು,” ಎಂದು ಸಲಹೆ ನೀಡಿದರು.

ಜಮಖಂಡಿ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಯಶವಂತ ಕೊಕ್ಕನವರ ವಿಶೇಷ ಉಪನ್ಯಾಸ ನೀಡಿ, “ಯುವಕರು ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ವ್ಯಾಮೋಹದಿಂದ ದೂರವಿದ್ದು ಗುರಿಯತ್ತ ಗಮನಹರಿಸಬೇಕು. ಸಕಾರಾತ್ಮಕ ಚಿಂತನೆ ಹಾಗೂ ಪರಿಶ್ರಮವೇ ಯಶಸ್ಸಿನ ಮಂತ್ರ,” ಎಂದರು.

ಮಹಾವಿದ್ಯಾಲಯದ ಪ್ರಾಂಶುಪಾಲ ವಿಲಾಸ್ ಕಾಂಬಳೆ ಅಧ್ಯಕ್ಷತೆ ವಹಿಸಿದ್ದರು. ಶೈಕ್ಷಣಿಕ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಾನಂದ ದಿವಾನಮಳ ಸ್ವಾಗತಿಸಿದರು. ಡಾ. ಆರ್.ಎ. ಬಡಿಗೇರ ಅತಿಥಿಗಳನ್ನು ಪರಿಚಯಿಸಿದರು. ವೇದಿಕೆಯಲ್ಲಿ ಜಿನೇಂದ್ರ ಬಣಜವಾಡ, ಡಾ. ಶಾಂತಿನಾಥ ಬಳೋಜ, ಸಂತೋಷ್ ಉಂಡಾಡಿ, ಡಾ. ಸುರೇಶ ತಕತರಾವ, ಡಾ. ಮಹಾಂತೇಶ ಉಕ್ಕಲಿ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ವರದಿ ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!