ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭಾರೀ ಮಳೆಯಿಂದ ರಸ್ತೆ ಸಂಪರ್ಕ ಸಂಪೂರ್ಣ ಬಂದ್

ಬೆಳಗಾವಿ/ ಬೈಲಹೊಂಗಲ: ಸಮೀಪದ ಹೊಸೂರ ಗ್ರಾಮದಲ್ಲಿ ಹಾದು ಹೊಗುವ ಬೈಲಹೊಂಗಲ ಮುನವಳ್ಳಿ ಸಂಪರ್ಕಿಸುವ ರಾಜ್ಯ ಹೆದ್ದಾರಿ ಸೋಮವಾರ ಸುರಿದ ಭಾರೀ ಮಳೆಯಿಂದ ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆಗಿದೆ.
ಈ ಸೇತುವಿಗೆ ಮುತವಾಡ, ಇಂಚಲ, ಮುರಗೋಡ ಹಾಗೂ ನೇಸರಗಿಯಿಂದ ಹಲಕಿ ಕ್ರಾಸ್ ವರೆಗಿನ ರಾಜ್ಯ ಹೆದ್ದಾರಿಯ ಬಲಭಾಗದ ಎಲ್ಲಾ ಮಳೆ ನೀರು ಈ ಸೇತುವೆ ಮೂಲಕ ಹಾದು ಮಲಪ್ರಭಾ ನದಿ ಸೇರುತ್ತದೆ. ಸೋಮವಾರ ಸುರಿದ ಭಾರೀ ಮಳೆಯಿಂದ ನಿರ್ಮಾಣ ಹಂತದ ಸೇತುವೆ ಕೊಚ್ಚಿಕೊಂಡು ಹೋಗಿದೆ.
ಹೊಸೂರ ಗ್ರಾಮದ ಹತ್ತಿರವಿರುವ ಯಕ್ಕುಂಡಿ ಸೇತುವೆ ಎಂದು ಕರೆಯುವ ಈ ಕಿರು ಸೇತುವೆ ಸಂಪೂರ್ಣವಾಗಿ ನೀರಿನಲ್ಲಿ ಮುಳಗಿ ಹೋಗಿದೆ. ಈ ಭಾಗದ ಜನರು ಮಳೆಗಾಲದಲ್ಲಿ ಸೇತುವೆ ಮುಳುಗಿ ಹೋಗುವದರಿಂದ, ಸೋಗಲಕ್ಷೇತ್ರ, ಮಾಟೋಳ್ಳಿ, ಮಲ್ಲೂರು, ಸೋಗಲ, ಯಕ್ಕುಂಡಿ, ದುಪದಾಳ, ಕಾರ್ಲಕಟ್ಟಿ, ಬಡ್ಲಿ, ಕಾತ್ರಾಳ, ಗೊಂದಿ, ಅನೇಕ ತಾಂಡಾಗಳು ಹಾಗೂ ಬೈಲಹೊಂಗಲದಿಂದ ಮುನವಳ್ಳಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಅತಿಯಾದ ತೊಂದರೆಯಾಗುತಿತ್ತು. ಈ ಬಗ್ಗೆ ಗಮನ ಹರಿಸಿದ ಬೆಳಗಾವಿ ಸಂಸದರು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಪ್ರಯತ್ನದಿಂದ ಕೋಟ್ಯಾಂತರ ರೂಪಾಯಿ ಅನುದಾನ ದಲ್ಲಿ ಸೇತುವೆ ನಿರ್ಮಾಣ ಪ್ರಾರಂಭವಾಗಿತ್ತು. ಕಳೆದ ಹಲವು ತಿಂಗಳಲ್ಲಿ ಕೇವಲ ಸೇತುವೆ ಅಗೆಯುವ ಕೆಲಸದಲ್ಲೆ ನಿರತರಾದ ಗುತ್ತಿಗೆದಾರ ಆಮೆಗತಿಯಲ್ಲಿ ಕಾಮಗಾರಿ ಪ್ರಾರಂಭಿಸಿದ್ದರಿಂದ ತಾತ್ಕಾಲಿಕವಾಗಿ ನಿರ್ಮಿಸಿದ ಸೇತುವೆಯು ಸಂಪೂರ್ಣ ಕೊಚ್ಚಿಕೊಂಡು ಹೋಗಿದೆ. ತಾತ್ಕಾಲಿಕ ಸೇತುವೆ ಮರು ನಿರ್ಮಾಣದ ವರೆಗೆ ಈ ರಸ್ತೆಯ ಪ್ರಯಾಣ ಕಷ್ಟಸಾಧ್ಯವಾಗಿದೆ. ರೈತರಿಗೆ ವಿದ್ಯಾರ್ಥಿಗಳಿಗೆ ಹಾಗೂ ಪ್ರಯಾಣಿಕರಿಗೆ ಅತ್ಯಂತ ತೊದರೆ ತಲೆದೋರಿದ್ದು ಸಂಬಂಧಿಸಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸಿ ಶೀಘ್ರ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವ ಅನುಭವ ಗುತ್ತಿಗೆದಾರನಿಗೆ ಕಾಮಗಾರಿ ಬದಲಾಯಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ವರದಿ ಮಂಜು ಎಂ.ಚಿಕ್ಕಣ್ಣವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!