ಬಳ್ಳಾರಿ / ಕಂಪ್ಲಿ : ಸ್ಥಳೀಯ ಪಟ್ಟಣದ ಚಲವಾದಿಕೇರಿಯಲ್ಲಿ ಅಂಬೇಡ್ಕರ್ ಅನುಯಾಯಿಗಳ ಬಳಗ, ಜೆಬಿ ಕಿಂಗ್ಸ್ ಆಶ್ರಯದಲ್ಲಿ ಏರ್ಪಡಿಸಿದ್ದ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವದಲ್ಲಿ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಪತ್ರಗಳನ್ನು ವಿತರಿಸಿ ಗೌರವಿಸಲಾಯಿತು.
ಪಿಐ ವಾಸುಕುಮಾರ್, ಕಂಪ್ಲಿ ಜೆಸ್ಕಾಂ ಎಇಇ ಕೆ.ಶ್ರೀನಿವಾಸ ಪ್ರಸಾದ್, ದಿಶಾ ಸಮಿತಿ ಸದಸ್ಯ ಎ.ಸಿ.ದಾನಪ್ಪ, ಪ್ರಾಚಾರ್ಯ ಸಿದ್ದಣ್ಣ ಪರಮೇಶ್ವರ, ಶಿಕ್ಷಕ ರಮೇಶ್ ಸುಗ್ಗೇನಹಳ್ಳಿ ಹಾಗೂ ಇತರರು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ತತ್ವ,ಆದರ್ಶ, ಜೀವನ ಚರಿತ್ರೆ ಕುರಿತು ಸಮಗ್ರವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಎಂ.ಸಿ.ಮಾಯಪ್ಪ, ಸಿದ್ಧಿ ಅಂಜಿನಪ್ಪ, ಚನ್ನಪ್ಪ, ಟಿ.ಶಿವಪ್ಪ, ಬಳಗದ ಪದಾಧಿಕಾರಿಗಳಾದ ಯೋಗರಾಜ್, ಸುನೀಲ್ ಸುರೇಶ್ ಸೇರಿದಂತೆ ಇತರರು ಇದ್ದರು.
ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆಗೆ ಅಖಿಲ ಭಾರತ ವೀರಶೈವ ಲಿಂಗಾಯತ ಯುವ ವೇದಿಕೆಯ ಜಿಲ್ಲಾ ಅಧ್ಯಕ್ಷ ಹೊಸಕೋಟೆ ಜಗದೀಶ್ ಚಾಲನೆ ನೀಡಿದರು.
ವರದಿ : ಜಿಲಾನಸಾಬ್ ಬಡಿಗೇರ್




















