ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾಂಗ್ರೆಸ್ ಹೈಕಮಾಂಡ್ ಹೈವೋಲ್ಟೇಜ್ ತಂತ್ರ, ಜಾತಿ ಸಮೀಕರಣದ ಆಧಾರದ ಮೇಲೆ ನಾಲ್ವರಿಗೆ ಡಿಸಿಎಂ ಸ್ಥಾನ

ಬೆಂಗಳೂರು : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆದು ನೂತನ ಮುಖ್ಯಮಂತ್ರಿಯ ಆಯ್ಕೆಯ ಬಳಿಕವೂ ವೋಟ್​​ ಬ್ಯಾಂಕ್​​ ಕಳೆದುಕೊಳ್ಳದಿರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್​​ ವರಿಷ್ಠರು ಹತ್ತು ಹಲವು ತಂತ್ರಗಳನ್ನು ಹೆಣೆದಿದ್ದಾರೆ. ಜಾತಿ ಸಮೀಕರಣ ಆಧರಿಸಿ ಲೆಕ್ಕಾಚಾರ ಹಾಕಲಾಗಿದ್ದು, ಕೇವಲ ಮುಖ್ಯಮಂತ್ರಿ ಬದಲಾವಣೆ ಮಾತ್ರವಲ್ಲದೆ ಸರ್ಕಾರ ಮತ್ತು ಪಕ್ಷಕ್ಕೆ ಸಂಬಂಧಿಸಿ ಕೆಲ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಸಿಎಂ ಬದಲಾವಣೆಯಿಂದ ಯಾವುದೇ ಸಮುದಾಯಗಳಿಗೂ ನೋವಾಗಂತೆ ನೋಡಿಕೊಳ್ಳುವ ಬಗ್ಗೆಯೂ ಹೈಕಮಾಂಡ್​​ ಪ್ಲ್ಯಾನ್​​ ರೂಪಿಸಿರುವ ಮಾಹಿತಿ ಸಿಕ್ಕಿದೆ.

ನಾಲ್ವರಿಗೆ ಡಿಸಿಎಂ ಸ್ಥಾನ?

ನೂತನ ಮುಖ್ಯಮಂತ್ರಿಯ ಆಯ್ಕೆ ಜೊತೆಗೆ ನಾಲ್ವರಿಗೆ ಡಿಸಿಎಂ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್​​ನಲ್ಲಿ ಚರ್ಚೆ ನಡೆದಿದೆ. ಜಾತಿ ಸಮೀಕರಣ ಆಧರಿಸಿ ನಾಲ್ವರಿಗೆ ಪ್ರಾತಿನಿಧ್ಯ ನೀಡುವ ಮಾತುಗಳು ಕೇಳಿಬಂದಿವೆ. ಒಬಿಸಿ, ದಲಿತ, ಮುಸ್ಲಿಂ ಅಥವಾ ಅಲ್ಪಸಂಖ್ಯಾತ ಮತ್ತು ಲಿಂಗಾಯತ ಕೋಟಾದಡಿಯಲ್ಲಿ ನಾಲ್ವರನ್ನು ಉಪಮುಖ್ಯಮಂತ್ರಿ ಮಾಡುವ ಬಗ್ಗೆ ವರಿಷ್ಠರು ಒಲವು ತೋರಿದ್ದಾರಂತೆ.

ಡಿಸಿಎಂ ರೇಸ್​​ನಲ್ಲಿ ಯಾರ್ಯಾರು?

ದಲಿತ ಕೋಟಾದಲ್ಲಿ ಹಾಲಿ ಗೃಹ ಸಚಿವರಾಗಿರುವ ಪರಮೇಶ್ವರ್ ಅಥವಾ ಸಚಿವ ಪ್ರಿಯಾಂಕ್​​ ಖರ್ಗೆ ಡಿಸಿಎಂ ಆಗುವ ಸಾಧ್ಯತೆ ಇದ್ದರೆ, ಒಬಿಸಿ ಕೋಟಾದಲ್ಲಿ ಯತೀಂದ್ರಗೆ ಡಿಸಿಎಂ ಸ್ಥಾನ ಸಿಗಬಹುದು ಎನ್ನಲಾಗಿದೆ. ಇನ್ನು ಮುಸ್ಲಿಂ ಕೋಟಾದಲ್ಲಿ ಹಾಲಿ ಸಚಿವ ಜಮೀರ್ ಅಥವಾ ಸದ್ಯ ವಿಧಾನ ಸಭೆ ಸ್ಪೀಕರ್​​ ಆಗಿರುವ ಯು.ಟಿ. ಖಾದರ್​ಗೆ ಹೈಕಮಾಂಡ್​​ ಮಣೆ ಹಾಕುವ ಸಾಧ್ಯತೆ ಇದೆ. ಲಿಂಗಾಯತ ಕೋಟಾದಲ್ಲಿ ಈಶ್ವರ್ ಖಂಡ್ರೆ ಮತ್ತು ಎಂ.ಬಿ.ಪಾಟೀಲ್ ರೇಸ್​​ನಲ್ಲಿದ್ದರೆ, ಅಲ್ಪಸಂಖ್ಯಾತ ಕೋಟಾದಲ್ಲಿ ಕೆ.ಜೆ.ಜಾರ್ಜ್​ಗೆ ಡಿಸಿಎಂ ಸ್ಥಾನ ಸಿಗುವ ಬಗ್ಗೆ ಅಂದಾಜಿಸಲಾಗಿದೆ.

ನೂತನ ಸಿಎಂ ಬೆನ್ನಲ್ಲೇ ಕೆಪಿಸಿಸಿಗೂ ಹೊಸ ಸಾರಥಿ
ಇನ್ನು ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಅವರ ಆಯ್ಕೆ ಬಹುತೇಕ ಖಚಿತವಾಗಿರುವ ಹಿನ್ನೆಲೆ ಕೆಪಿಸಿಸಿಗೂ ಹೊಸ ಸಾರಥಿಯ ನೇಮಕವಾಗಲಿದೆ. ಸಿಎಂ ಘೋಷಣೆಯ ಜೊತೆ ಜೊತೆಗೆ ಕೆಪಿಸಿಸಿಗೂ ನೂತನ ಅಧ್ಯಕ್ಷರನ್ನು ಹೈಕಮಾಂಡ್ ಘೋಷಿಸಲಿದ್ದು, ಸಿಎಂ ಮತ್ತು ಡಿಸಿಎಂ ಆಯ್ಕೆ ಆಧರಿಸಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ದಕ್ಕಲಿದೆ ಎಂಬುದು ನಿರ್ಧಾರವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಈಗಾಗಲೇ ಸಚಿವ ಸತೀಶ್​​ ಜಾರಕಿಹೊಳಿ ಕಣ್ಣಿಟ್ಟಿದ್ದು, ಈ ಸಂಬಂಧ ಕೆಲ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಹೈಕಮಾಂಡ್​​ ಮನ್ನಣೆ ಯಾರಿಗೆ ಅನ್ನೋದನ್ನು ಕಾದು ನೋಡಬೇಕಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!