ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಸರಕಾರಿ ಶತಮಾನ ಶಾಲೆಯ ಅತಿಥಿ ಶಿಕ್ಷಕ ರಾಮಪ್ಪ ಎಸ್ ಅವರ ಮಗಳು ಎಸ್ ಆರ್ ಪ್ರಕೃತಿ 10ನೇ ವರ್ಷದ ಜನ್ಮದಿನದ ಅಂಗವಾಗಿ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.
ನಿರೂಪಕ ಸಂಪನ್ಮೂಲ ವ್ಯಕ್ತಿ ಎಸ್. ರಾಮಪ್ಪ ಮಾತನಾಡಿ ಪ್ರತಿಯೊಬ್ಬರು ತಮ್ಮ ಮಕ್ಕಳ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಮಾದರಿಯಾಗಬೇಕು ಅಲ್ಲದೆ ಆಡಂಬರಕ್ಕೆ ಅವಕಾಶ ನೀಡಬಾರದು ಮತ್ತು ಮಕ್ಕಳು ಭವಿಷ್ಯದ ದಿನಮಾನಗಳಲ್ಲಿ ಇಂತಹ ಕಾರ್ಯಗಳನ್ನು ಮಾಡಲು ಅವರಿಗೆ ನಾವು ಮಾರ್ಗದರ್ಶನ ನೀಡಬೇಕು ಎಂದರು.
ಕೇಕ್ ಕತ್ತರಿಸಿ ಸುಮಾರು 25ಕ್ಕೆ ಹೆಚ್ಚು ಮಕ್ಕಳಿಗೆ ಪುಸ್ತಕ, ಪೆನ್ನು, ಪೆನ್ಸಿಲ್, ಮತ್ತು ರಬ್ಬರ್ ಲೇಖನಿ ಸಾಮಗ್ರಿಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕಿ ಚೈತ್ರಾ, ವಿದ್ಯಾರ್ಥಿಗಳಾದ ಜಡಿಮೂರ್ತಿ, ಶ್ರೇಯ ಪಲ್ಲವಿ ಉಷಾ ರಂಜಿತ ಸೇರಿದಂತೆ ಇತರರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















