ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುಜರಾತ್ ವಿರುದ್ಧ ಗೆದ್ದು ಫೈನಲ್​ಗೇರಿದ ಆರ್​ಸಿಬಿ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ಐಪಿಎಲ್ 2026 ರ ಕ್ವಾಲಿಫೈಯರ್ 1 ಪಂದ್ಯ ನಡೆಯಿತು. ಈ ಪಂದ್ಯವನ್ನು ಆರ್​ಸಿಬಿ 92 ರನ್‌ಗಳಿಂದ ಗೆದ್ದು ಸತತ ಎರಡನೇ ಬಾರಿಗೆ ಫೈನಲ್‌ಗೇರಿತು.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 254 ರನ್ ಗಳಿಸಿತು. ಉತ್ತರವಾಗಿ, ಗುಜರಾತ್ ಟೈಟಾನ್ಸ್ 162 ರನ್‌ಗಳಿಗೆ ಆಲೌಟ್ ಆಯಿತು. ಆರ್​ಸಿಬಿ ಪರ ಜಾಕೋಬ್ ಡಫಿ ಗರಿಷ್ಠ 3 ವಿಕೆಟ್ ಪಡೆದರೆ, ಜೋಶ್ ಹ್ಯಾಜಲ್‌ವುಡ್, ರಸಿಕ್ ಸಲಾಂ ದಾರ್ ಮತ್ತು ಕೃನಾಲ್ ಪಾಂಡ್ಯ ತಲಾ 2 ವಿಕೆಟ್ ಪಡೆದರು. ಇವರಲ್ಲದೆ, ಭುವನೇಶ್ವರ್ ಕುಮಾರ್ 1 ವಿಕೆಟ್ ಪಡೆದರು.

ಗುಜರಾತ್ ಟೈಟಾನ್ಸ್ 162 ರನ್‌ಗಳಿಗೆ ಆಲೌಟ್ ಆಯಿತು. ಇದರೊಂದಿಗೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 92 ರನ್‌ಗಳಿಂದ ಪಂದ್ಯವನ್ನು ಗೆದ್ದು ಫೈನಲ್‌ನಲ್ಲಿ ಸ್ಥಾನ ಪಡೆದುಕೊಂಡಿತು. ಈ ಪಂದ್ಯದಲ್ಲಿ ಆರ್‌ಸಿಬಿ ಅದ್ಭುತ ಬೌಲಿಂಗ್ ಮಾಡಿತು. ಜಾಕೋಬ್ ಡಫಿ ಮೂರು ವಿಕೆಟ್‌ಗಳನ್ನು ಪಡೆದರೆ, ಜೋಶ್ ಹ್ಯಾಜಲ್‌ವುಡ್, ರಸಿಕ್ ಸಲಾಂ ದಾರ್ ಮತ್ತು ಕೃನಾಲ್ ಪಾಂಡ್ಯ ತಲಾ ಎರಡು ವಿಕೆಟ್ ಪಡೆದರು. ಭುವನೇಶ್ವರ್ ಕುಮಾರ್ ಕೂಡ ಒಂದು ವಿಕೆಟ್ ಪಡೆದರು.
ಗುಜರಾತ್ ಬ್ಯಾಟಿಂಗ್ ವೈಫಲ್ಯ
255 ರನ್‌ಗಳ ಗುರಿ ಬೆನ್ನಟ್ಟಿದ ಗುಜರಾತ್‌ನ ಬ್ಯಾಟಿಂಗ್ ಸಂಪೂರ್ಣವಾಗಿ ಕುಸಿಯಿತು. ಸಾಯಿ ಸುದರ್ಶನ್ 14 ರನ್‌ಗಳಿಗೆ ಹಿಟ್ ವಿಕೆಟ್ ಆದರೆ, ನಾಯಕ ಶುಭ್​ಮನ್ ಗಿಲ್ ಕೇವಲ 2 ರನ್‌ಗಳಿಗೆ ಬೌಲ್ಡ್ ಆದರು. ವಿಕೆಟ್ ಕೀಪರ್ ಜೋಸ್ ಬಟ್ಲರ್ 11 ಎಸೆತಗಳಲ್ಲಿ 29 ರನ್ ಗಳಿಸಿ ಔಟಾದರು. ನಿಶಾಂತ್ ಸಿಂಧು 5 ರನ್ ಗಳಿಸಿ ಔಟಾದರೆ, ವಾಷಿಂಗ್ಟನ್ ಸುಂದರ್ ಕೂಡ 8 ರನ್ ಗಳಿಸಿ ಔಟಾದರು. ಜೇಸನ್ ಹೋಲ್ಡರ್​ಗೆ ತಮ್ಮ ಖಾತೆಯನ್ನು ತೆರೆಯಲೂ ಸಾಧ್ಯವಾಗಲಿಲ್ಲ. ಆದಾಗ್ಯೂ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ರಾಹುಲ್ ತೆವಾಟಿಯಾ 68 ರನ್​ಗಳ ಇನ್ನಿಂಗ್ಸ್ ಆಡಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ. ಇತ್ತ ಆರ್‌ಸಿಬಿ ಪರ ವೇಗಿ ಜಾಕೋಬ್ ಡಫಿ ಮೂರು ವಿಕೆಟ್‌ಗಳನ್ನು ಪಡೆರೆ, ಜೋಶ್ ಹ್ಯಾಜಲ್‌ವುಡ್, ರಸಿಕ್ ಸಲಾಂ ದಾರ್ ಮತ್ತು ಕೃನಾಲ್ ಪಾಂಡ್ಯ ತಲಾ 2 ವಿಕೆಟ್ ಪಡೆದರು. ಇವರಲ್ಲದೆ, ಭುವನೇಶ್ವರ್ ಕುಮಾರ್ 1 ವಿಕೆಟ್ ಪಡೆದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!