ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಂದಿನ ಸಿಎಂ ಡಿ.ಕೆ ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಹಲವು ತಿಂಗಳಿಂದ ನಡೆಯುತ್ತಿದ್ದ ನಾಯಕತ್ವ ಬದಲಾವಣೆ ಚರ್ಚೆಗೆ ಕೊನೆಗೂ ಇತಿಶ್ರೀ ಹಾಡಲಾಗಿದೆ. ಸಚಿವರೊಂದಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಾವು ರಾಜೀನಾಮೆ ನೀಡುತ್ತಿರುವುದಾಗಿ ಹಾಗೂ ಮುಂದಿನ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಎಂದು ಮಾಹಿತಿ ನೀಡಿದ್ದಾರೆ.

ಸುಮಾರು 2 ಗಂಟೆಗಳ ಕಾಲ ನಡೆದ ಈ ಬ್ರೇಕ್ ಫಾಸ್ಟ್ ಮೀಟಿಂಗ್ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯಿತು. ಉಪಹಾರ ಸಭೆಗೆ ಬಂದ ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಆಪ್ತತೆಯಿಂದ ಆಲಿಂಗನ ಮಾಡಿದರು.

ಬಳಿಕ ಸಚಿವರೊಂದಿಗೆ ಮಾತುಕತೆ ನಡೆಸಿದ ಸಿದ್ದರಾಮಯ್ಯ ಅವರು, ಇಂದು ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತೇನೆ. ರಾಜ್ಯಪಾಲರು ಇಲ್ಲದೇ ಇದ್ದರೆ ಅವರ ಕಾರ್ಯದರ್ಶಿಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಇದೇ ವೇಳೆ ಭಾವುಕರಾದ ಸಿದ್ದರಾಮಯ್ಯ ಅವರು, ನಾನು ಮಾಡಿರುವ ಕೆಲಸಗಳ ಬಗ್ಗೆ ನನಗೆ ಸಮಾಧಾನ ಇದೆ, ಎಲ್ಲಾ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮುಂದೆ ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಹೋಗಿ. ಜನರಿಗೆ ಒಳ್ಳೇ ಯೋಜನೆಗಳನ್ನು ನೀಡಿ. ಬಿಜೆಪಿಯಿಂದ ಅಲರ್ಟ್ ಆಗಿ ಇರಿ ಎಂದು ಸಲಹೆ ನೀಡಿದ್ದಾರೆ. ಬಳಿಕ ಮುಂದಿನ ಸಿ. ಎಂ. ಡಿ.ಕೆ. ಶಿವಕುಮಾರ್ ಎಂದೂ ಸಚಿವರಿಗೆ ಮಾಹಿತಿ ನೀಡಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!