ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಹೂವಿನ ಹಿಪ್ಪರಗಿ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬೀಜಗಳ ವಿತರಣೆ ಕಾರ್ಯಕ್ರಮಕ್ಕೆ ಚಾಲನೆಯನ್ನು ದೇವರ ಹಿಪ್ಪರಗಿ ಶಾಸಕರಾದ ರಾಜೂಗೌಡ .ಬ.ಪಾಟೀಲ್ ಇವರು ನೀಡಿದರು.
ರೈತರಿಗೆ ಸಜ್ಜೆ, ಮೆಕ್ಕೆಜೋಳ, ತೊಗರಿ, ಸೂರ್ಯಕಾಂತಿ ಬೀಜಗಳನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗುರುನಗೌಡ ಪಾಟೀಲ್ ಜೆಡಿಎಸ್ ಮುಖಂಡರು ಮತ್ತು ಬಸವನಬಾಗೇವಾಡಿ ತಾಲೂಕಿನ ಕೃಷಿ ಇಲಾಖೆ ಅಧಿಕಾರಿ ಎಪಿ ಬಿರಾದರ್ ಮತ್ತು ಹೂವಿನ ಹಿಪ್ಪರಗಿ ರೈತ ಸಂಪರ್ಕ ಕೇಂದ್ರ ಅಧಿಕಾರಿ ಭೀಮಾಶಂಕರ್ ಕುಂಬಾರ್ ಸೇರಿದಂತೆ ಸ್ಥಳೀಯ ರೈತರು ಉಪಸ್ಥಿತರಿದ್ದರು .
ವರದಿಗಾರರು ಶಿವಪುತ್ರ ವಡ್ಡರ




















