ಬಳ್ಳಾರಿ / ಕಂಪ್ಲಿ ತಾಲೂಕಿನ ಮೇಟ್ರಿ ಗ್ರಾಮದ ಕಾಂಗ್ರೆಸ್ ಯುವ ಮುಖಂಡ ಹೆಚ್. ಕುಮಾರಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿ ಸತತವಾಗಿ ಎರಡು ಬಾರಿ ಶಾಸಕರಿಗೆ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯ ಕೆಲಸವನ್ನು ನಿರ್ವಹಿಸಿ ಬಳ್ಳಾರಿ ಜಿಲ್ಲೆಯಲ್ಲಿ ಜನಪ್ರಿಯತೆಯನ್ನು ಪಡೆದಿರುವ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ. ಎನ್. ಗಣೇಶ್ ರವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದರು.
ಬಳ್ಳಾರಿ ಜಿಲ್ಲೆಯ ಜನರ ಪ್ರಮುಖ ಹಕ್ಕೊತ್ತಾಯವಾಗಿದೆ ರಾಜ್ಯದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ರಚನೆ ಮತ್ತು ವಿಸ್ತರಣೆಯ ಚರ್ಚೆಗಳು ನಡುವೆ ಕಂಪ್ಲಿ ಶಾಸಕರು ಅಭಿವೃದ್ಧಿ ಪರವಾಗಿದ್ದು ಪಕ್ಷ ಮತ್ತು ಹೈಕಮಾಂಡ್ ನಿರ್ಧರಿಸಿ ಸಚಿವ ಸ್ಥಾನ ನೀಡಬೇಕು ಸಚಿವ ಸ್ಥಾನ ನೀಡಿದ್ದಲ್ಲಿ ಜನಪ್ರಿಯ ಶಾಸಕ ಜೆ. ಎನ್. ಗಣೇಶ್ ರವರು ರಾಜ್ಯದಲ್ಲಿ ಉತ್ತಮ ಅಭಿವೃದ್ಧಿಯನ್ನು ಸಾಧಿಸಿ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಿ ಅಡಿಯಲ್ಲಿ ಇವರ ಸೇವೆ ಅನನ್ಯವಾಗಿರುತ್ತದೆ ಹಾಗಾಗಿ ಕಂಪ್ಲಿ ಮತ್ತು ಕುರುಗೋಡು ಕ್ಷೇತ್ರದ ಎಲ್ಲಾ ಸಮುದಾಯದ ಜನರನ್ನು ಒಟ್ಟುಗೂಡಿಸಿ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿಯ ಪರವಾಗಿದ್ದಾರೆ ಹಾಗಾಗಿ ಈ ಬಾರಿ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಈ ಮೂಲಕ ಕ್ಷೇತ್ರದ ಜನರ ಪರವಾಗಿ ಮಾಧ್ಯಮದ ಮುಖಾಂತರ ಕಾಂಗ್ರೆಸ್ ಹೈಕಮಾಂಡ್ಗೆ ವಿನಂತಿಸಿಕೊಳ್ಳುತ್ತೇನೆ ಎಂದು ತಿಳಿಸಿದರು.
ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















