ಬಾಗಲಕೋಟೆ ಜಿಲ್ಲೆಯ ಹಿರಿಯ ಲಿಂಗಾಯತ ನಾಯಕರು ಮಾಜಿ ಸಚಿವರಾದ ಎಸ್ ಆರ್ ಪಾಟೀಲ್ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂಬ ಒತ್ತಾಯ ಬಾಗಲಕೋಟೆ ಹಾಗೂ ವಿಜಯಪುರ ಅವಳಿ ಜಿಲ್ಲೆಯ ಜನತೆ ಹಾಗೂ ಬೆಂಬಲಿಗರ ಒತ್ತಾಯವಾಗಿದೆ ಎಂದು ಮಾಜಿ ಜಿಲ್ಲಾ ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಾಸುರಾಜ ಭಾವಿ ಒತ್ತಾಯ ಮಾಡಿದರು.
ಎಸ್ ಆರ್ ಪಾಟೀಲ್ ಕಳೆದ ಮೂರು ದಶಕಗಳ ಕಾಲ ಅವಳಿ ಜಿಲ್ಲೆಯ ರೖತರ ಕಾರ್ಮಿಕರು ಹಾಗೂ ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ ಐಟಿಬಿಟಿ ಸಚಿವರಾಗಿ ಹಲವಾರು ಬದಲಾವಣೆ ತಂದಿದ್ದಾರೆ ಉತ್ತರ ಕರ್ನಾಟಕದ ಜೀವನಾಡಿಗಳಾದ ಕೃಷ್ಣ ಮಹದಾಯಿ ನವಲಿ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಸದನದಲ್ಲಿ ಹಲವಾರು ಬಾರಿ ಧ್ವನಿ ಎತ್ತಿದ್ದಾರೆ ಪಕ್ಷ ನೀಡಿದ ಹಲವಾರು ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ ಇವರ ಸುದೀರ್ಘ ಆಡಳಿತ ಅನುಭವ ಹಾಗೂ ಪಕ್ಷ ಸಂಘಟನಾ ಸಾಮರ್ಥ ಹೊಂದಿದ್ದಾರೆ ಎಂದು ವಾಸುರಾಜ ಭಾವಿ ಹೇಳಿದರು.
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ದೃಷ್ಟಿಯಿಂದ ಹಾಗೂ ಪ್ರಾದೇಶಿಕ ಪ್ರತಿನಿಧಿತ್ವವನ್ನು ಬಲಪಡಿಸುವ ಉದ್ದೇಶದಿಂದ ಎಸ್ ಆರ್ ಪಾಟೀಲ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ಈ ಕುರಿತು ಸೂಕ್ತ ನಿರ್ಧಾರ ಕೈಗೊಂಡು ಉತ್ತರ ಕರ್ನಾಟಕದ ಜನರ ಆಸೆ ಈಡೇರಿಸಬೇಕು ಎಂದು ವಾಸುರಾಜ ಅ ಭಾವಿ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಎಸ್ ಆರ್ ಪಾಟೀಲ್ ಅವರು ಆವಳಿ ಜಿಲ್ಲೆಯ ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತಗೆ ಆಯ್ಕೆಯಾಗಿ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಿದು ಶಿಕ್ಷಣ ಆರೋಗ್ಯ ನೀರಾವರಿ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಯೋಜನೆಗಳಿಗೆ ಹೆಚ್ಚಿನ ಗಮನ ಹರಿಸಿದ್ದಾರೆ ಎಂದರು.
ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರ ಕಷ್ಟಗಳಿಗೆ ಸ್ಪಂದಿಸುವ ನಾಯಕರಾಗಿ ರಾಜ್ಯದಲ್ಲಿ ಗುರುತಿಸಿಕೊಂಡಿದ್ದಾರೆ ಸಚಿವರಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಆಡಳಿತದಲ್ಲಿ ತಮ್ಮ ಅನುಭವ ಬಳಸಿಕೊಂಡು ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತರಲು ಪ್ರಯತ್ನಿಸಿದ್ದಾರೆ.
ಸರಳ ವ್ಯಕ್ತಿತ್ವ ಸಂಘಟನಾ ಸಾಮರ್ಥ್ಯ ಹಾಗೂ ಜನಪರ ಕಾರ್ಯಶೈಲಿಯಿಂದ ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಸ್ಥಾನಗಳಿಸಿದ್ದಾರೆ ಎಂದರು.
ಎಸ್ ಆರ್ ಪಾಟೀಲ ಅವರು ಅವಳಿ ಜಿಲ್ಲೆಗೆ ಸೀಮಿತವಾಗದೆ ಕರ್ನಾಟಕದ ಪ್ರಮುಖ ನಾಯಕರಲ್ಲಿ ಒಬ್ಬರಾಗಿ ಪರಿಗಣಿಸಲ್ಪಡುತ್ತಾರೆ ಎಲ್ಲಾ ಸಮಾಜ ಗೌರವಿಸುವ ನಾಯಕ ಅಂದರೆ ಎಸ್ ಆರ್ ಪಾಟೀಲ್ ಇಂಥ ನಾಯಕರಿಗೆ ಉಪಮುಖ್ಯಮಂತ್ರಿ ಮಾಡಿ ಪ್ರಮುಖ ಖಾತೆ ನೀಡಿದರೆ ಉತ್ತರ ಕರ್ನಾಟಕ ಅಭಿವೃದ್ಧಿ ಹೊಂದುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಮಾಧ್ಯಮಗಳಿಗೆ ತಿಳಿಸಿದರು.
- ಕರುನಾಡ ಕಂದ ಸುದ್ದಿ




















