ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ: ರೋಗನಿರೋಧಕ ಬೆಳೆಗಳಿಗೆ ಆದ್ಯತೆ ನೀಡಲು ರೈತರಿಗೆ ಸಲಹೆ

ಮುಂಗಾರು ಬಿತ್ತನೆ ಬೀಜ ವಿತರಣೆಗೆ ಹುನಗುಂದ ಕೃಷಿ ಇಲಾಖೆ ಚಾಲನೆ

ಹುನಗುಂದ: ಕೃಷಿ ಇಲಾಖೆ ಹಾಗೂ ಕೃಷಿಕ ಸಮಾಜದ ವತಿಯಿಂದ ಸೋಮವಾರ ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಮುಂಗಾರು ಬಿತ್ತನೆ ಬೀಜ ವಿತರಣೆಗೆ ಚಾಲನೆಯನ್ನು ನೀಡಲಾಯಿತು.
ಈ ವೇಳೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸೋಮಲಿಂಗಪ್ಪ ಅಂಟರತಾನಿ ಮಾತನಾಡಿ, ಈ ಬಾರಿ ಮುಂಗಾರು ಹಂಗಾಮಿನ ಪೂರ್ವದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಭಾರತೀಯ ಹವಾಮಾನ ವರದಿಯಂತೆ ಮುಂದೇನೂ ಕೂಡಾ ಅಂತಹ ಆಶಾದಾಯಕ ಮಳೆಯಾಗುವ ಸಂಭವವಿಲ್ಲದಿರುವದರಿಂದ ಇಂತಹ ಪರಿಸ್ಥಿತಿಯಲ್ಲಿ ರೈತರು ರೋಗ ನಿರೋಧಕ ಬೆಳೆಗಳಾದ ತೊಗರಿ, ಸೂರ್ಯಕಾಂತಿ, ಸಜ್ಜೆ ಹಾಗೂ ನವಣೆಯಂತಹ ಬೀಜ ಬಿತ್ತಿದರೇ ಮಾತ್ರ ಅಲ್ಪ ಮಳೆಗೆ ಹೆಚ್ಚಿನ ಇಳುವರಿ ಪಡೆಯಬಹುದಾಗಿದೆ. ಮಧ್ಯ ಪ್ರಾಚ್ಯದಲ್ಲಿ ಉಂಟಾದ ಬಿಕ್ಕಟ್ಟಿನಿಂದ ಯೂರಿಯಾ ಹಾಗೂ ಡಿಎಪಿ ಗೊಬ್ಬರದ ಕೊರತೆ ಸ್ವಲ್ಪ ಮಟ್ಟಿಗಿದೆ. ಬೇರೆ ಗೊಬ್ಬರ ಹಾಗೂ ಬೀಜದ ಕೊರತೆ ಇಲ್ಲ. ರೈತರು ಸಾವಯವ ಗೊಬ್ಬರ ಬಳಕೆಗೆ ಹೆಚ್ಚಿನ ಆಧ್ಯತೆ ನೀಡಬೇಕು. ರೈತರು ಬೆಳೆಗಳಿಗೆ ಮಿತವಾಗಿ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು. ಸರ್ಕಾರದ ತಾಂತ್ರಿಕ ನಿರ್ದೇಶನದಂತೆ ತಡವಾಗಿ ಬೀಜ ವಿತರಣೆ ಮಾಡಲಾಗುತ್ತಿದೆ. ಮಳೆ ಕಡಿಮೆ ಆಗಿದ್ದರಿಂದ ಬೀಜದ ಬೇಡಿಕೆ ಕಡಿಮೆಯಾಗಿದೆ ಎಂದರು. ಕೃಷಿಕ ಸಮಾಜದ ಅಧ್ಯಕ್ಷ ಸಂಜೀವ ಜೋಶಿ ಮಾತನಾಡಿ ರೈತರು ಬಿತ್ತನೆ ಬೀಜ ಹಾಗೂ ಗೊಬ್ಬರವನ್ನು ಖರೀದಿಸುವಾಗ ಸಂಬಂಧಪಟ್ಟ ಅಂಗಡಿಯವರಿಂದ ಕಡ್ಡಾಯವಾಗಿ ರಶೀದಿ ಪಡೆಯಬೇಕು. ರೈತರು ಬೀಜೋಪಚಾರದಿಂದ ರೋಗಗಳ ನಿಯಂತ್ರಣದ ಜೊತೆಗೆ ಉತ್ತಮ ಇಳುವರಿ ಪಡೆಯಲು ಸಾಧ್ಯವಾಗುತ್ತದೆ ಎಂದರು.
ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಪ್ರಭು ಇದ್ದಲಗಿ, ಪ್ರಧಾನ ಕಾರ್ಯದರ್ಶಿ ಶ್ರೀಕೃಷ್ಣ ಜಾಲಿಹಾಳ, ಖಜಾಂಚಿ ಬಸವರಾಜ ಹೊಸಮನಿ, ನಿರ್ದೇಶಕರಾದ ಶರಣಗೌಡ ಅರಸಿಬಿಡಿ, ವಿಜಯ ಮಹಾಂತೇಶ ಮಲಗಿಹಾಳ, ಶರಣು ಗೋಲಪ್ಪನವರ, ಕೃಷಿ ಅಧಿಕಾರಿ ಮಹೇಶ ಕಟಗೇರಿ, ಸಂಗಮೇಶ ಸಜ್ಜನ ಅರುಣಕುಮಾರ ಚವ್ಹಾಣ, ಶಂಭಯ್ಯ ಹಿರೇಮಠ ಮತ್ತು ಶೇಖಣ್ಣ ನಾಗೂರ ಸೇರಿದಂತೆ ರೈತರು ಇದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!