ಬೀದರ್: ರಾಜ್ಯ ಸಚಿವರಾದ ಈಶ್ವರ ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡುವಂತೆ ಸಮಾಜಮುಖಿ ಕಾರ್ಯಕರ್ತ ಬಾಲಾಜಿ ಜಬಾಡೆ ಅವರು ರಾಜ್ಯ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.
ಈಶ್ವರ ಖಂಡ್ರೆ ಅವರು ರಾಜ್ಯದ ಅಭಿವೃದ್ಧಿ, ರೈತರು, ಕಾರ್ಮಿಕರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ಅವರ ಆಡಳಿತ ಅನುಭವ ಮತ್ತು ಜನಪರ ಕಾರ್ಯಗಳನ್ನು ಪರಿಗಣಿಸಿ ಡಿಸಿಎಂ ಹುದ್ದೆ ನೀಡಬೇಕು ಎಂದು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.
ಬೀದರ್ ಜಿಲ್ಲೆಯ ಅಭಿವೃದ್ಧಿಗೆ ಈಶ್ವರ ಖಂಡ್ರೆ ಅವರ ಕೊಡುಗೆ ಅಪಾರವಾಗಿದ್ದು, ಅವರಿಗೆ ಡಿಸಿಎಂ ಸ್ಥಾನ ನೀಡುವುದರಿಂದ ಕಲ್ಯಾಣ ಕರ್ನಾಟಕ ಭಾಗದ ಜನರ ಆಶೋತ್ತರಗಳಿಗೆ ಇನ್ನಷ್ಟು ಬಲ ಸಿಗಲಿದೆ ಹಾಗಾಗಿ
ಈ ಸಂಬಂಧ ರಾಜ್ಯ ನಾಯಕತ್ವವು ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಬಾಲಾಜಿ ಜಬಾಡೆ ಮನವಿ ಮಾಡಿದ್ದಾರೆ.
- ಕರುನಾಡ ಕಂದ ಸುದ್ದಿ




















