ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾಗವಾಡ ತಾ.ಪಂ. ಸಾಮಾನ್ಯ ಸಭೆ: ರೈತರಿಗೆ ರಸಗೊಬ್ಬರ-ಬೀಜಗಳ ಕೊರತೆ ಆಗದಂತೆ ಕ್ರಮಕ್ಕೆ ಸೂಚನೆ.!

ಬೆಳಗಾವಿ/ ಕಾಗವಾಡ: ಮುಂಗಾರು ಹಂಗಾಮು ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರ ಬಿತ್ತನೆ ಕಾರ್ಯಗಳು ವೇಗ ಪಡೆದುಕೊಂಡಿದ್ದು, ಅಗತ್ಯ ರಸಗೊಬ್ಬರ ಹಾಗೂ ಉತ್ತಮ ಗುಣಮಟ್ಟದ ಬೀಜಗಳ ಪೂರೈಕೆಯಲ್ಲಿ ಯಾವುದೇ ರೀತಿಯ ಕೊರತೆ ಉಂಟಾಗದಂತೆ ಕೃಷಿ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ (ಅಭಿವೃದ್ಧಿ) ಬಸವರಾಜ ಅಡವಿಮಠ ಸೂಚಿಸಿದರು.

ಗುರುವಾರ ಕಾಗವಾಡ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲೂಕ ಪಂಚಾಯಿತಿಯ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರು ಕೃಷಿ ಚಟುವಟಿಕೆಗಳಿಗೆ ಸಂಪೂರ್ಣವಾಗಿ ಸಜ್ಜಾಗಿರುವ ಸಂದರ್ಭದಲ್ಲಿ ಅಗತ್ಯ ಕೃಷಿ ಪರಿಕರಗಳು ಹಾಗೂ ಇತರೆ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಲಭ್ಯವಾಗುವಂತೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆ ಹಾಗೂ ಮುಂಗಾರು ಆರಂಭದ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಸಂಬಂಧಿಸಿದ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ನೀರಿನ ಕೊರತೆ ಕಂಡುಬರುವ ಗ್ರಾಮಗಳಲ್ಲಿ ಅಗತ್ಯವಿದ್ದರೆ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಇದೇ ವೇಳೆ, ಗ್ರಾಮ ಪಂಚಾಯಿತಿಗಳು ಸರ್ಕಾರದ ಮಾರ್ಗಸೂಚಿಗಳ ಅನುಸಾರವಾಗಿ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಬೇಕು. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸುರಕ್ಷಿತ ಹಾಗೂ ಶುದ್ಧ ನೀರು ಪೂರೈಕೆ ಆಗುವಂತೆ ಕ್ರಮ ವಹಿಸಬೇಕೆಂದು ತಿಳಿಸಿದರು.

15ನೇ ಹಣಕಾಸು ಆಯೋಗದ ಅನುದಾನ ಬಳಕೆಯಲ್ಲಿ ನಿರ್ಲಕ್ಷ್ಯ ಬೇಡ !

15ನೇ ಹಣಕಾಸು ಆಯೋಗದ ಅನುದಾನದಡಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸಬೇಕು. ಗ್ರಾಮೀಣ ಜನತೆಗೆ ನೇರ ಪ್ರಯೋಜನವಾಗುವ ರೀತಿಯಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಅನುದಾನವನ್ನು ಸಮರ್ಪಕವಾಗಿ ಬಳಸದೆ ನಿರ್ಲಕ್ಷ್ಯ ತೋರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಓ) ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಸವರಾಜ ಅಡವಿಮಠ ಎಚ್ಚರಿಕೆ ನೀಡಿದರು.

ಸರ್ಕಾರದ ವಿವಿಧ ಜನಪರ ಯೋಜನೆಗಳು ಜನರಿಗೆ ತಲುಪುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಪ್ರತಿಯೊಬ್ಬ ಅಧಿಕಾರಿಯೂ ತಮ್ಮ ಇಲಾಖೆಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದು ಸಾರ್ವಜನಿಕರ ವಿಶ್ವಾಸ ಗಳಿಸಬೇಕು ಎಂದು ಹೇಳಿದರು.

ನಕಲಿ ಪಶು ವೈದ್ಯರ ವಿರುದ್ಧ ಕ್ರಮಕ್ಕೆ ಸೂಚನೆ !

ಸಭೆಯಲ್ಲಿ ಪಶುಸಂಗೋಪನಾ ಇಲಾಖೆಯ ಕಾರ್ಯವೈಖರಿಯ ಕುರಿತು ಚರ್ಚೆ ನಡೆಯಿತು. ಗ್ರಾಮೀಣ ಪ್ರದೇಶಗಳಲ್ಲಿ ಕೆಲವರು ಪಶು ವೈದ್ಯರ ಹೆಸರಿನಲ್ಲಿ ಪಶುಗಳಿಗೆ ನಕಲಿ ಚಿಕಿತ್ಸೆ ನೀಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ರೈತರು ಹಾಗೂ ಪಶುಪಾಲಕರಿಗೆ ಸ್ಪಂದಿಸಿದರೆ ಇಂತಹ ಅನಧಿಕೃತ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ. ಆದ್ದರಿಂದ ಪಶು ವೈದ್ಯಾಧಿಕಾರಿಗಳು ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡಬೇಕು ಹಾಗೂ ನಕಲಿ ಚಿಕಿತ್ಸೆ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ತಾಲೂಕ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವೀರಣ್ಣ ವಾಲಿ, ಬಿಸಿಎಂ ಅಧಿಕಾರಿ ವೆಂಕಟೇಶ್ ಕುಲಕರ್ಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ. ಮದಬಾವಿ, ರವೀಂದ್ರ ಮುರುಗಾಲಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ಅರಣ್ಯಾಧಿಕಾರಿ ರಾಕೇಶ್ ಅರ್ಜುನವಾಡ, ನಿಂಗನಗೌಡ ಬಿರಾದರ್, ಎ.ಡಿ. ಅನ್ಸಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ವಿಠ್ಠಲ ಖೋಕಾಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!