ಹಾವೇರಿ ಜಿಲ್ಲೆಯ ಶಿಗ್ಗಾವ್ ತಾಲ್ಲೂಕಿನ ಹೊಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲಾಯಿತು. ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮರಗಳನ್ನು ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡಬೇಕೆಂದು ಗಣ್ಯರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು, ಮುಖ್ಯ ಶಿಕ್ಷಕರು, ಶಾಲೆಯ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು, ಗ್ರಾಮದ ಹಿರಿಯರು, ಗಣ್ಯರು, ಊರಿನ ನಾಗರಿಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು.
ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವ, ಮರಗಳ ಅವಶ್ಯಕತೆ ಹಾಗೂ ಪರಿಸರ ಸಮತೋಲನ ಕಾಪಾಡುವ ಕುರಿತು ಮಾಹಿತಿ ನೀಡಲಾಯಿತು. ಕಾರ್ಯಕ್ರಮವು ಪರಿಸರ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.
ವರದಿ ಬಸವರಾಜ ಎಸ್. ಎನ್.




















