ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಡ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕಾದ ಮಹಾದೇವಿ ಮಠಪತಿ: 10 ವಿದ್ಯಾರ್ಥಿಗಳ ದತ್ತು, ವಿದ್ಯಾರ್ಥಿ ವೇತನ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ

ಹಾವೇರಿ ಜಿಲ್ಲೆಯ ಶಿಗ್ಗಾವ್ ತಾಲ್ಲೂಕು : ಶ್ರೀಮತಿ ಶೈಲಜಾ ಚ. ಕಟ್ಟೆಪ್ಪನವರ ಶಿಕ್ಷಕಿ ಅವರ ಸ್ಮರಣಾರ್ಥವಾಗಿ ಹೊಸೂರು ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ವೇತನ, ಬಹುಮಾನ ವಿತರಣೆ ಹಾಗೂ ವಿದ್ಯಾರ್ಥಿ ದತ್ತು ಸ್ವೀಕಾರ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ದಿ. ಶ್ರೀಮತಿ ಶೈಲಜಾ ಚ. ಕಟ್ಟೆಪ್ಪನವರ ಅವರ ಸಹೋದರಿ ಹಾಗೂ ನಿವೃತ್ತ ಶಿಕ್ಷಕಿಯಾದ ಶ್ರೀಮತಿ ಮಹಾದೇವಿ ಮಠಪತಿ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿದರು.
ಇದೇ ಸಂದರ್ಭದಲ್ಲಿ ಅವರು ಶಿಕ್ಷಣದಿಂದ ಯಾವುದೇ ವಿದ್ಯಾರ್ಥಿ ವಂಚಿತರಾಗಬಾರದು ಎಂಬ ಮಹತ್ತರ ಉದ್ದೇಶದಿಂದ 10 ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಿ, ಅವರ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡರು.

ಶ್ರೀಮತಿ ಮಹಾದೇವಿ ಮಠಪತಿ ಅವರು ಹಲವು ವರ್ಷಗಳಿಂದ ತಮ್ಮ ಸ್ವಂತ ವೆಚ್ಚದಲ್ಲಿ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುಸ್ತಕಗಳು, ಶಾಲಾ ಸಮವಸ್ತ್ರ, ಶೈಕ್ಷಣಿಕ ಸಾಮಗ್ರಿಗಳು ಹಾಗೂ ಅಗತ್ಯ ಆರ್ಥಿಕ ನೆರವನ್ನು ನೀಡುತ್ತಾ ಬಂದಿದ್ದಾರೆ. ಅಲ್ಲದೆ ಪ್ರೌಢಶಾಲೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಚೆಕ್ ಮುಖಾಂತರ ಆರ್ಥಿಕ ಸಹಾಯ ನೀಡಿ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ.

ಅವರ ಈ ನಿಸ್ವಾರ್ಥ ಸಮಾಜಸೇವೆ ಹಾಗೂ ಶಿಕ್ಷಣ ಪ್ರೇಮದಿಂದ ಅನೇಕ ಬಡ ಕುಟುಂಬಗಳ ಮಕ್ಕಳಿಗೆ ಉತ್ತಮ ಭವಿಷ್ಯ ರೂಪುಗೊಳ್ಳುತ್ತಿದೆ. ಸಮಾಜಮುಖಿ ಕಾರ್ಯಗಳ ಮೂಲಕ ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನಿರಂತರವಾಗಿ ನೆರವಾಗುತ್ತಿರುವ ಶ್ರೀಮತಿ ಮಹಾದೇವಿ ಮಠಪತಿ ಅವರಿಗೆ ಸಾರ್ವಜನಿಕರು ಹಾಗೂ ಶಾಲಾ ಕುಟುಂಬದವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದರು. ಇಂತಹ ಸೇವಾ ಕಾರ್ಯಗಳು ಮತ್ತಷ್ಟು ವಿಸ್ತರಿಸಲಿ ಹಾಗೂ ಇನ್ನಷ್ಟು ಬಡ ಮಕ್ಕಳ ಬದುಕಿಗೆ ಬೆಳಕಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು.

ಇದೇ ಸಂದರ್ಭದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಲಾಯಿತು. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಗಣ್ಯರು ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಗಾಗಿ ಪ್ರತಿಜ್ಞೆ ಕೈಗೊಂಡರು.

ಕಾರ್ಯಕ್ರಮದ ಮುಖ್ಯ ಶಿಕ್ಷಕರಾದ ಶಿವಾನಂದ ಮುದಣ್ಣವರ, ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ ಇಂದೂರು, ಚಂದ್ರಣ್ಣ ಲಕ್ಕಣ್ಣವರ್, ಶಂಕರಲಿಂಗಯ್ಯ ಚೆನ್ನಯ್ಯ ಕಟ್ಟೆಪ್ಪನವರ, ಶ್ರೀಮತಿ ಶ್ವೇತಾ ಗೊಂಗಚ್ಚಿ, ಶ್ರೀಮತಿ ಮಹನಂದ ಹೆಬ್ಬಳ್ಳಿ, ಶ್ರೀಮತಿ ಪ್ರತಿಭಾ ಹಳೆಮನಿ ಸೇರಿದಂತೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಗ್ರಾಮದ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ದಿವಂಗತ ಶೈಲಜಾ ಚ. ಕಟ್ಟೆಪ್ಪನವರ ಅವರ ಸ್ಮರಣಾರ್ಥ ನಡೆದ ಈ ಕಾರ್ಯಕ್ರಮವು ಶಿಕ್ಷಣ, ಸಮಾಜಸೇವೆ ಹಾಗೂ ಪರಿಸರ ಜಾಗೃತಿಯ ಸಂದೇಶವನ್ನು ಸಾರುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ವರದಿ ಬಸವರಾಜ ಎಸ್. ಎನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!