ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶ್ವ ಪರಿಸರ ದಿನಾಚರಣೆ: ಸವಡಿ ಗ್ರಾಮ ಪಂಚಾಯಿತಿಯಿಂದ ವಿವಿಧ ಕಾರ್ಯಕ್ರಮಗಳು

ಸವಡಿ, ಜೂನ್ 5: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸವಡಿ ಗ್ರಾಮ ಪಂಚಾಯಿತಿಯ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳೊಂದಿಗೆ ಸ್ಥಳೀಯ ಶಾಲೆಗಳಲ್ಲಿ ಪರಿಸರ ಸಂರಕ್ಷಣೆಯ ಮಹತ್ವ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಡೆಯಿತು. ವಿದ್ಯಾರ್ಥಿಗಳಿಗೆ ಪರಿಸರ ರಕ್ಷಣೆ, ಮರಗಳ ಮಹತ್ವ ಹಾಗೂ ಸ್ವಚ್ಛ ಪರಿಸರ ನಿರ್ಮಾಣದಲ್ಲಿ ಪ್ರತಿಯೊಬ್ಬರ ಪಾತ್ರದ ಬಗ್ಗೆ ಮಾಹಿತಿ ನೀಡಲಾಯಿತು.
ಅದೇ ರೀತಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಗಾಗಿ ಕೈಗೊಳ್ಳಬೇಕಾದ ಕ್ರಮಗಳು, ಪ್ಲಾಸ್ಟಿಕ್ ಬಳಕೆ ಕಡಿಮೆಗೊಳಿಸುವುದು ಹಾಗೂ ಹಸಿರು ವಾತಾವರಣ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸುವ ಅಗತ್ಯತೆ ಕುರಿತು ಚರ್ಚಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಪರಿಸರ ಸಂರಕ್ಷಣೆಗಾಗಿ ಪ್ರತಿಜ್ಞೆ ಸ್ವೀಕರಿಸಿ, ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಹಾಗೂ ಹಸಿರಾಗಿಡಲು ಸಂಕಲ್ಪ ಮಾಡಿದರು.
ಗ್ರಾಮ ಪಂಚಾಯಿತಿ ಸಿಬ್ಬಂದಿ, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!