ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎರಡನೇ ಹಂತದ ಸಚಿವ ಸಂಪುಟದಲ್ಲಿ ಕಂಪ್ಲಿ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲವಾದಲ್ಲಿ ಅಹಿಂದ ಮತಗಳನ್ನು ಕಳೆದುಕೊಳ್ಳಬೇಕಾಗುತ್ತದೆ : ಶಬ್ಬೀರ್ ಹೆಚ್.

ಬಳ್ಳಾರಿ / ಕಂಪ್ಲಿ : ಕಂಪ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳೊಂದಿಗೆ ಜನರ ಮನೆ ಮಾತಾಗಿರುವ ಶಾಸಕ ಜೆ.ಎನ್.ಗಣೇಶ್‌ಗೆ ಎರಡನೇ ಹಂತದ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ ಸೌಹಾರ್ದ ವೇದಿಕೆ ವೇದಿಕೆಯ ರಾಜ್ಯ ಉಪಾಧ್ಯಕ್ಷ ಶಬ್ಬೀರ್ ಹೆಚ್ ಒತ್ತಾಯಿಸಿದರು.
ಅವರು ಪಟ್ಟಣದಲ್ಲಿ ಪತ್ರಿಕಾ ಪ್ರಕಟಣೆ ನೀಡಿ ಮಾತನಾಡಿ, ವಿಜಯನಗರ (ಹೊಸಪೇಟೆ) ಸೇರಿದಂತೆ ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ ಅತಿ ಹೆಚ್ಚಿನ ಅಭಿವೃದ್ಧಿ ಮಾಡುವ ಜೊತೆಗೆ ಜಿಲ್ಲೆಯ ಜನರ ಮನದಲ್ಲಿ ನೆಲೆಸಿದ್ದಾರೆ. ಮೊದಲಿಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಜೊತೆಗೆ ರೈತಾಪಿ ವರ್ಗ ಮತ್ತು ಕಾರ್ಮಿಕರ ಬಗ್ಗೆ ಅತಿ ಹೆಚ್ಚಿನ ಒಲವು ತೋರಿದ್ದಾರೆ. ಒಟ್ಟಾರೆಯಾಗಿ ಯುವ ನಾಯಕ ಉತ್ತರ ಕರ್ನಾಟಕ ಭಾಗದ ಅಹಿಂದ ಸಮುದಾಯಗಳ ಸಮಾನತೆಗಾಗಿ ಶ್ರಮಿಸುತ್ತಿದ್ದಾರೆ. ಜಾತ್ಯಾತೀತ ಮನೋಭಾವನೆಯೊಂದಿಗೆ ಸರ್ವರಲ್ಲೂ ಪ್ರೀತಿ, ವಿಶ್ವಾಸದೊಂದಿಗೆ ಸರಳ ಸಜ್ಜನಿಕೆಯ ರಾಜ್ಯಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ. ಆದ್ದರಿಂದ ಈಗಾಗಲೇ ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ ಪಟ್ಟಾಭಿಷೇಕ ಮಾಡಿಕೊಳ್ಳುವ ಜೊತೆಗೆ ಕೆಲವರಿಗೆ ಮೊದಲ ಹಂತದ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಕಲ್ಪಿಸಿದ್ದಾರೆ. ಅದರಂತೆಯೇ ಎರಡನೇ ಹಂತದ ಸಚಿವ ಸಂಪುಟದಲ್ಲಿ ಕಡ್ಡಾಯವಾಗಿ ಶಾಸಕ ಜೆ.ಎನ್.ಗಣೇಶ್‌ಗೆ ಸಚಿವ ಸ್ಥಾನ ನೀಡಬೇಕು. ಒಂದು ವೇಳೆ ಕಾಂಗ್ರೆಸ್ ಪಕ್ಷವು ಇವರನ್ನು ಗುರುತಿಸದೇ ಇದ್ದಲ್ಲಿ, ಬಳ್ಳಾರಿ, ವಿಜಯನಗರ ಜಿಲ್ಲೆ ಒಳಗೊಂಡಂತೆ ಉತ್ತರ ಕರ್ನಾಟಕದ ಬಹು ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಮತಗಳನ್ನು ಹೊಂದಿರುವ ವಾಲ್ಮೀಕಿ ನಾಯಕ, ಮುಸ್ಲಿಂ, ಹಿಂದುಳಿದ ವರ್ಗಗಳ ಮತಗಳನ್ನು ಪಕ್ಷ ಕಳೆದುಕೊಳ್ಳುತ್ತದೆ ಎಂದು ಎಚ್ಚರಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!