ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

20 ಶಾಲೆಗಳಿಗೆ ಉಚಿತವಾಗಿ ನೋಟ್ ಬುಕ್ ವಿತರಣೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕರಿಮನೆ ಶಾಲೆಯಲ್ಲಿ ಡಚ್ ವಿವ್ಯೂ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಮತ್ತು ನಗು ಫೌಂಡೇಶನ್ ಬೆಂಗಳೂರು ಸಹಯೋಗದಲ್ಲಿ 20 ಶಾಲೆಗಳಿಗೆ ಉಚಿತವಾಗಿ ನೋಟ್ ಬುಕ್ ವಿತರಣೆ ಮಾಡುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀನಿವಾಸ್ ರವರು ವಹಿಸಿದ್ದರು.
ನೂತನ ಕ್ಷೇತ್ರಶಿಕ್ಷಣಾಧಿಕಾರಿಗಳಾದ ಜಯಣ್ಣ ರವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ನಗು ಫೌಂಡೇಶನ್ ಕಾರ್ಯವನ್ನು ಪ್ರಶಂಸೆ ಮಾಡಿದರು.
ಇದೆ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀಮತಿ ಯಶೋಧರವರು ಮಾತನಾಡಿ ದೀಪ್ತಿಯವರು ವಿದೇಶದಲ್ಲಿದ್ದುಕೊಂಡು ಭಾರತದ ಸೇವೆ ಮಾಡುತ್ತಿರುವುದು ನಮಗೆಲ್ಲ ಹೆಮ್ಮೆ ಎನಿಸಿದೆ. ಅವರಿಗೆ ಇರುವ ಕಾಳಜಿಯನ್ನು ನಾವೆಲ್ಲಾ ಮೆಚ್ಚಬೇಕು ಎಂದು ಹೇಳಿದರು. ಶಿಕ್ಷಕರ ಸಂಘದ ಅಧ್ಯಕ್ಷ ಆದರ್ಶ ಕೂಡ ಫೌಂಡೇಶನ್ ಮತ್ತು ಸಮಾಜದಲ್ಲಿ ನಮ್ಮ ಪಾತ್ರದ ಬಗ್ಗೆ ವಿವರಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಷಣ್ಮುಖರಾಜನ್ ಮಾತನಾಡಿ ನಾವು ಹಿಂದೆ ಓದುವಾಗ ಯಾವುದೇ ದಾನಿಗಳು ಸಿಗುತ್ತಿರಲಿಲ್ಲ ಈಗ ಎಲ್ಲವು ಸಿಗುತ್ತಿದೆ ಅದರ ಸದ್ಭಳಕೆ ಬಹು ಮುಖ್ಯ ಎಂದು ಮನವರಿಕೆ ಮಾಡಿಕೊಟ್ಟರು. ನೋಟ್ ಬುಕ್ ವಿತರಣೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಿದ ಸಿ ಆರ್ ಸುರೇಶ ರವರು ನಗು ಫೌಂಡೇಶನ್ ಇಲ್ಲಿಯವರೆಗೆ ಮಾಡಿರುವ ಸಂಪೂರ್ಣ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ನೀಡಿದರು. ಕೊನೆಯಲ್ಲಿ ಅತಿಥಿಗಳನ್ನು ಸನ್ಮಾನಿಸಿ, ಕರಿಮನೆ ಶಾಲೆಯ ಮಕ್ಕಳಿಗೆ ಹಾಗೂ 20 ಶಾಲೆಯ ಮುಖ್ಯಗುರುಗಳಿಗೆ ನೋಟ್ ಬುಕ್ ವಿತರಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕರಾದ ಎಂ ಬಿ ಅಭಿಷೇಕ್, ಸಿ ಆರ್ ಪಿ ಗಳಾದ ಜ್ಯೋತಿ, ರುದ್ರಸ್ವಾಮಿ, ಎಸ್ ಡಿ ಎಂ ಸಿ ಯವರಾದ ಜಯಸುಧಾ, ಸುಂದರ್, ಶಿಕ್ಷಕರು ಮತ್ತು ಮಕ್ಕಳು ಹಾಜರಿದ್ದರು. ನಂಜುಂಡಸ್ವಾಮಿ ನಿರೂಪಿಸಿದರೆ, ಅಭಿಷೇಕ್ ಸ್ವಾಗತಿಸಿದರು. ಮಕ್ಕಳು ಪ್ರಾರ್ಥನೆ ಮಾಡಿದರೆ ರಾಜನಾಯ್ಕ ವಂದಿಸಿದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!