ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭರವಸೆಯ ಬೆಳ್ಳಿಚುಕ್ಕಿ ನಿಹಾರಿಕಾ

ತಂದೆ-ತಾಯಿಗಳು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಮಕ್ಕಳ ಆಸಕ್ತಿ ಮತ್ತು ಅಭಿರುಚಿಯನ್ನು ಉತ್ತೇಜಿಸುತ್ತಾ ಅವರ ಸಾಧನೆಗೆ ಪೂರಕವಾಗಿ ನಿರಂತರ ಪ್ರೋತ್ಸಾಹ ನೀಡುತ್ತಿರುತ್ತಾರೆ. ಈ ರೀತಿಯ ಬೆಂಬಲದ ಫಲವಾಗಿ ಹುನಗುಂದ ತಾಲೂಕಿಗೆ ಅತೀ ಹೆಚ್ಚು ಅಂಕ ಗಳಿಸಿ ಕಿರು ಸಾಧನೆಗೆ ಭಾಜನವಾದ ಪುಟ್ಟ ವಿದ್ಯಾರ್ಥಿನಿ ನಿಹಾರಿಕಾ.

ಸೂಳೇಬಾವಿಯ ನಿಹಾರಿಕಾ ಚಂದ್ರಶೇಖರ ಮಾಶ್ಯಾಳ 6ನೇ ತರಗತಿ ಶಾಲಾ ಪ್ರವೇಶಕ್ಕಾಗಿ ನಡೆದ ಐದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಯ್ಕೆಯಾಗಿ ಸಾಧನೆ ಮಾಡಿದ್ದಾಳೆ. ಮೊರಾರ್ಜಿ ದೇಸಾಯಿ ಮತ್ತು ಆದರ್ಶ ವಿದ್ಯಾಲಯ ಪರೀಕ್ಷೆಯಲ್ಲಿ ಹುನಗುಂದ ತಾಲೂಕಿಗೆ ಟಾಪರ್ ಆಗಿ ಗಮನ ಸೆಳೆದಿದ್ದಾಳೆ.

ಸೂಳೇಬಾವಿಯ ಶ್ರೀ ರಾಮಯ್ಯಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ನಿಹಾರಿಕಾ 2026-27 ನೇ ಸಾಲಿನ ಜವಾಹರ ನವೋದಯ, ಸೈನಿಕ್ ಸ್ಕೂಲ್, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಆದರ್ಶ ವಿದ್ಯಾಲಯ ಮತ್ತು ಮೂಡಬಿದ್ರೆಯ ಆಳ್ವಾಸ್ ಶಾಲಾ ಪ್ರವೇಶ ಪರೀಕ್ಷೆಯಲ್ಲಿ ಅರ್ಹ ಅಂಕ ಗಳಿಸಿ ಆಯ್ಕೆಯಾಗಿದ್ದು ಅಂತಿಮವಾಗಿ ಮೂಡಬಿದ್ರೆಯ ಆಳ್ವಾಸ್ ಶಾಲೆಯನ್ನು ಆಯ್ಕೆ ಮಾಡಿಕೊಂಡು ವಿದ್ಯಾಭ್ಯಾಸ ಮುಂದುವರಿಸಿದ್ದಾಳೆ.

ಶೀಲಾ ಜೋಗೂರ ಮತ್ತು ಚಂದ್ರಶೇಖರ ಮಾಶ್ಯಾಳ ಶಿಕ್ಷಕ ದಂಪತಿಗಳ ಏಕೈಕ ಪುತ್ರಿಯಾದ ನಿಹಾರಿಕಾ ಕನ್ನಡ ಮಾಧ್ಯಮವನ್ನೇ ಮೊದಲ ಆಯ್ಕೆಯಾಗಿ ಪರಿಗಣಿಸಿದ್ದು ತಂದೆ-ತಾಯಿಯರ ಕನ್ನಡ ಪ್ರೇಮವನ್ನು ಎತ್ತಿ ತೋರಿಸಿದೆ. ಜೊತೆಗೆ ಎಲ್ಲರೂ ಆಂಗ್ಲ ಮಾಧ್ಯಮವನ್ನೇ ಆಯ್ಕೆ ಮಾಡಿಕೊಂಡು ಓದುತ್ತಿರುವಾಗ ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಭವಿಷ್ಯದಲ್ಲಿ ಉತ್ತಮ ಉದ್ಯೋಗವಕಾಶ ಸಿಗುವ ಆಶಾಭಾವನೆ ಮತ್ತು ಕನ್ನಡದ ಅಸ್ಮಿತೆಗಾಗಿ, ಭಾಷೆಯ ಉಳಿವು ಮತ್ತು ಬೆಳವಣಿಗೆಗಾಗಿ ಮಗಳನ್ನು ಕನ್ನಡದಲ್ಲಿ ಓದಲು ಪ್ರೇರೇಪಿಸಲಾಗಿದೆ ಎನ್ನುತ್ತಾರೆ ತಾಯಿ ಶೀಲಾ.

ಅಪ್ಪ-ಅಮ್ಮನ ಆಸೆಯಂತೆ ಓದಿ ವಿದ್ಯಾವಂತಳಾಗಿ ಒಂದೊಳ್ಳೆ ಕೆಲಸ ಮಾಡುತ್ತೇನೆ. ಡಾಕ್ಟರ್, ಇಂಜಿನಿಯರ್, ಟೀಚರ್ ಅಂತ ಯಾವುದೇ ಕೆಲಸ ಆಯ್ಕೆ ಮಾಡಿಕೊಂಡರೂ ನನಗೆ ಡಾನ್ಸ್ ಮತ್ತು ಹಾಡುವುದು ಅಂದ್ರೆ ತುಂಬಾ ಇಷ್ಟ. ಅವುಗಳನ್ನು ಹವ್ಯಾಸವಾಗಿ ಬೆಳೆಸಿಕೊಳ್ಳುತ್ತೇನೆ ಎನ್ನುವ ನಿಹಾರಿಕಾಳ ಕನಸು ನನಸಾಗಲಿ. ಸಾಧನೆಯ ಹಾದಿಯಲ್ಲಿ ಭರವಸೆಯ ಬೆಳ್ಳಿಚುಕ್ಕಿಯಾಗಿ ಕಂಗೊಳಿಸಲಿ. ಅವಳ ಬದುಕು ಉಜ್ವಲವಾಗಲಿ ಎಂದು ಶುಭ ಹಾರೈಸುತ್ತಾ ಅವಳ ಈವರೆಗಿನ ಸಾಧನೆಗೆ ಅಭಿನಂದನೆಗಳು.

✍🏻 ಜಗದೀಶ ಹದ್ಲಿ, ಹುನಗುಂದ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!