ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಳ್ಳಿಗಳಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಯಾವ ಉದ್ದೇಶಕ್ಕೆ: ರೈತ ಮುಖಂಡ ವೀರಣ್ಣ ಗಂಗಾಣಿ

ಕಾಳಗಿ: ತಾಲೂಕಿನ ಹಳ್ಳಿಗಳಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನ ನಡೆಸಲು ಹಾಗೂ ರೈತರಿಗೆ ಬೇಕಾಗಿರುವ ಸಾಮಗ್ರಿಗಳು ತಮ್ಮ ಊರಿನಲ್ಲಿ ದೊರಕುವಂತಾಗಲು ಪಂಚಾಯಿತಿಗೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿಸಲಾಗಿದೆ ಆದರೆ ಇತ್ತೀಚಿನ ದಿನಗಳಲ್ಲಿ ಇದು ರೈತರಿಗೆ ಯಾವುದೇ ರೀತಿಯಿಂದ ಸಹಾಯವಾಗುವ ಕೆಲಸ ಮಾಡುತ್ತಿಲ್ಲ, ಈಗಾಗಲೇ ಮುಂಗಾರು ಪ್ರಾರಂಭವಾಗಿದ್ದು ಅವಳಿ ತಾಲೂಕಿನ ರೈತರಿಗೆ ಬೀಜ ಹಾಗೂ ರಸಗೊಬ್ಬರದ ಅತ್ಯವಶ್ಯಕವಾಗಿದೆ ಆದರೆ ರಸಗೊಬ್ಬರ ಬೀಜ ನೀಡಬೇಕಾದ ಸಂಘ-ಸಂಸ್ಥೆಗಳು ಕುಂಟು ನೆಪಗಳನ್ನು ಹೇಳಿ ಜಾರಿಕೊಳ್ಳುತ್ತಿದ್ದಾರೆ, ತಾಲೂಕುಗಳಲ್ಲಿ ಕೇವಲ ಬೆರಳಣಿಕೆಯಷ್ಟು ಸೊಸೈಟಿಗಳು ಮಾತ್ರ ರಸಗೊಬ್ಬರ ವಿತರಣೆ ಮಾಡುತ್ತಿದ್ದಾರೆ. ಆದರೆ ಇನ್ನೂ ಬಹಳಷ್ಟು ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಯಾವುದೇ ರಸಗೊಬ್ಬರಾಗಲಿ ಬೀಜಗಳಾಗಲಿ ಕೃಷಿಗೆ ಸಂಬಂಧಿಸಿದ ಕೃಷಿ ಸಲಕರಣೆಗಳಾಗಲಿ ವಿತರಿಸುತ್ತಿಲ್ಲ. ಯಾಕೆ ಎಂದು ರೈತ ಸಂಘದ ತಾಲೂಕ ಅಧ್ಯಕ್ಷರಾದ ವೀರಣ್ಣ ಗಂಗಾಣಿಯವರು ಪ್ರಶ್ನಿಸಿದಾಗ ಅವರು ಪ್ರತಿಕ್ರಿಯೆ ಡಿಡಿ ತುಂಬಲು ಹಣವಿಲ್ಲ ಪರವಾನಿಗೆ ಇಲ್ಲ ಜಿಎಸ್‌ಟಿ ಕಟ್ಟಿಲ್ಲ ಎಂದು ಉಡಾಫೆ ಉತ್ತರಗಳು ಕೊಡುತ್ತಿದ್ದಾರೆ. ಇವರ ಉಡಾಫೆ ಮಾತುಗಳಿಗೆ ಬೇಸತ್ತ ರೈತರು ಕೃಷಿ ಪುತ್ತಿನ ಸಹಕಾರ ಸಂಘದ ವಿರುದ್ಧ ಹೋರಾಟಕ್ಕೆ ಮುಂದಾಗ ಬೇಕಾಗುತ್ತದೆ ಎಂದು ವೀರಣ್ಣ ಗಂಗಾಣಿ ಅಧ್ಯಕ್ಷರು ತಾಲೂಕ ರೈತ ಸಂಘ ಹಾಗೂ ರೈತ ಸೇನೆ ಇವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!