ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಾಜರಕಲ್ಲು ಟೋಲ್ ಪ್ಲಾಜಾ ಬಳಿ ಭೀಕರ ರಸ್ತೆ ಅಪಘಾತ: ಲಾರಿ ಚಾಲಕ ಸಜೀವ ದಹನ

ಬಳ್ಳಾರಿ : ಬಳ್ಳಾರಿ ಗಡಿ ಭಾಗವಾದ ಅನಂತಪುರ
ಜಿಲ್ಲೆಯ ಡಿ.ಹಿರೇಹಾಳ್ ಮಂಡಲದ ಜಾಜರಕಲ್ಲು ಟೋಲ್ ಪ್ಲಾಜಾ ಸಮೀಪ ರಾಷ್ಟ್ರೀಯ ಹೆದ್ದಾರಿ-150ಎ ಮೇಲೆ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಚಾಲಕನೊಬ್ಬ ಸಜೀವ ದಹನಗೊಂಡ ಘಟನೆ ನಡೆದಿದೆ.

ಕಂಕರ್ (ಜಲ್ಲಿ) ತುಂಬಿಕೊಂಡು ತೆರಳುತ್ತಿದ್ದ ಲಾರಿ ಹಾಗೂ ಜಿಂದಾಲ್‌ನಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಸಿಮೆಂಟ್ ಟ್ಯಾಂಕ‌ರ್ ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಸಿಮೆಂಟ್ ಟ್ಯಾಂಕರ್‌ನ ಡೀಸೆಲ್ ಟ್ಯಾಂಕ್ ಸ್ಪೋಟಗೊಂಡು ಎರಡೂ ವಾಹನಗಳಿಗೆ ಬೆಂಕಿ ತಗುಲಿದೆ.

ಅಪಘಾತದಲ್ಲಿ ಕಂಕ‌ರ್ ಲಾರಿ ಚಾಲಕ ದೀಕ್ಷಿತ್ (32) ಬೆಂಕಿಯಲ್ಲಿ ಸಿಲುಕಿ ಸಜೀವ ದಹನಗೊಂಡಿದ್ದಾರೆ. ಸಿಮೆಂಟ್‌ ಟ್ಯಾಂಕ‌ರ್ ಚಾಲಕ ಮುತ್ತುರಾಜ್ ಸಮಯಪ್ರಜ್ಞೆ ತೋರಿಸಿ ವಾಹನದಿಂದ ಹೊರಬಂದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಬದುಕುಳಿದಿದ್ದಾರೆ.

ಘಟನಾ ಸ್ಥಳಕ್ಕೆ ರಾಯದುರ್ಗ ಗ್ರಾಮೀಣ ವಲಯದ ಸಿಐ ವೆಂಕಟರಮಣ ಹಾಗೂ ಬೊಮ್ಮನಹಳ್ಳಿ ಎಸ್.ಐ. ನಬಿ ರಸೂಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಕಂಕರ್ ಲಾರಿ ಚಾಲಕ ನಿದ್ರಾಮತ್ತಿನಲ್ಲಿ ತಪ್ಪು ಮಾರ್ಗದಲ್ಲಿ ಅತಿವೇಗವಾಗಿ ಚಲಾಯಿಸಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ದೀಕ್ಷಿತ್ ಅವರು ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪದ ಗೌಡನವಾಳ್ಳಿ ಗ್ರಾಮದ ನಿವಾಸಿಯಾಗಿದ್ದು, ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ ಎಂದು ತಿಳಿದುಬಂದಿದೆ.

ರಾಯದುರ್ಗ, ಬಳ್ಳಾರಿ ಹಾಗೂ ಅನಂತಪುರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!