ಬಳ್ಳಾರಿ / ಕಂಪ್ಲಿ: ಮಕ್ಕಳ ಕೈಗೆ ಸಿಗಬೇಕಿರುವುದು ಪುಸ್ತಕ ಮತ್ತು ಆಟದ ಸಾಮಗ್ರಿಗಳೇ ಹೊರತು, ದುಡಿಮೆಯ ಭಾರವಲ್ಲ. ಪ್ರತಿಯೊಂದು ಮಗುವಿಗೂ ಶಿಕ್ಷಣ ಮತ್ತು ಸುರಕ್ಷಿತ ಬಾಲ್ಯವನ್ನು ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.
ಪಟ್ಟಣದ ಕೊಟ್ಟಾಲ್ ರಸ್ತೆಯ ವಿಜಯನಗರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಆಡಳಿತ, ತಾ. ಪಂ. ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ, ಪೊಲೀಸ್ ಬಾಲಕಾರ್ಮಿಕ ಸೇರಿದಂತೆ ವಿವಿಧ ಇಲಾಖೆ ಮತ್ತು ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಲಕಾರ್ಮಿಕ ಮುಕ್ತ ಸಮಾಜ ನಮ್ಮೆಲ್ಲರ ಸಂಕಲ್ಪವಾಗಿದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತಿಯಾಗುವ ಮೂಲಕ ಉತ್ತಮ ಸಮಾಜ ನಿರ್ಮಣಕ್ಕೆ ಕೈಜೋಡಿಸೋಣ ಎಂದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕೆಎಸ್ಎಸ್ವಿಬಿ ಸುಬ್ಬಾರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಇಲ್ಲಿನ ಭಾಷಣ, ಪ್ರಬಂಧ ಸ್ಪರ್ಧೆಯ ವಿಜೇತ ಮಕ್ಕಳಿಗೆ ಪ್ರಸ್ತಕ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಉಪ ಪ್ರಾಚಾರ್ಯ ಸುನೀಲ್ ಮಾಲಿಪಾಟೀಲ್, ಇಸಿಒ ಟಿ.ಎಂ.ಬಸವರಾಜ, ಕಾರ್ಮಿಕ ನಿರೀಕ್ಷಕ ಶಿವಶಂಕರ ಬಿ.ತಳವಾರ, ಡಿಇಒ ಕೆ.ವಿಘ್ನೇಶ್, ವಿವಿಧ ಇಲಾಖೆಯ ಹೆಚ್.ಸಿ.ರಾಘವೇಂದ್ರ, ಪಿ.ಬಸವರಾಜ, ಜ್ಯೋತಿ, ಎಡಿಪಿಆರ್ ಶ್ರೀಶೈಲಗೌಡ, ರಾಮಾಂಜಿನೇಯ, ತಿಪ್ಪೇಶ ಸೇರಿದಂತೆ ಶಾಲಾ ಮಕ್ಕಳು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















