ಸಿರುಗುಪ್ಪ : ನಗರದ 28ನೇ ವಾರ್ಡಿನ ಅಂಗನವಾಡಿ ಕೇಂದ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮಹಿಳೆಯರು ಸ್ವ-ಉದ್ಯೋಗ ಪ್ರಾರಂಭಿಸಲು ಸ್ವ-ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮವನ್ನು ತಾಲೂಕು ಕ್ಷೇತ್ರ ಯೋಜನಾಧಿಕಾರಿ ವಸಂತ್ ಎಸ್. ರವರು ಉದ್ಘಾಟನೆ ಮಾಡಿ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮಹಿಳೆಯರಿಗೆ ಮೂರು ತಿಂಗಳ ಹೊಲಿಗೆ ತರಬೇತಿ, ಅಗರಬತ್ತಿ ತಯಾರಿಕೆ, ಬತ್ತಿ ತಯಾರಿಕೆ, ಫಿನಾಯಿಲ್ ತಯಾರಿಕೆ, ಬೊಕ್ಕೆ ತಯಾರಿ, ತೋರಣ ತಯಾರಿ, ಬ್ಯೂಟಿಷಿಯನ್ ಹೀಗೆ ಹತ್ತು ಹಲವು ಸ್ವ-ಉದ್ಯೋಗದಿಂದ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವುದಕ್ಕೆ ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನವನ್ನು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆದ ಬಾಗಿಲು ತೋರಣಗಳ ತರಬೇತಿ, ಸೀರೆ ಕುಚ್ಚು ತರಬೇತಿ, ಕೇಂದ್ರದ ಮಹಿಳೆಯರಿಗೆ ತರಬೇತಿಯಿಂದ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ನಂತರ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪೋಲಿಸ್ ಇಲಾಖೆಯ ಸಿಬ್ಬಂದಿ ಶ್ರೀಮತಿ ನಾಗರತ್ನರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯು ಸಾಲ ನೀಡುವ ಸಂಸ್ಥೆಯಾಗಿರದೆ
ಮಹಿಳೆರು ಇತರೆ ಕುಟುಂಬ ಸದಸ್ಯರನ್ನು ಅವಲಂಬಿಸದೆ ಸ್ವಂತ ಕೆಲಸ ಮಾಡಿ ಸ್ವಾವಲಂಬಿಗಳಾಗಿ ಜೀವನ ನಡೆಸಬೇಕು, ಇದಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹಲವಾರು ಯೋಜನೆಗಳನ್ನ ರೂಪಿಸಿದ್ದು ಮಾಸಿಕವಾಗಿ ನಡೆಯುವ ಜ್ಞಾನವಿಕಾಸ ಕೇಂದ್ರ ಸಭೆಗಳಿಗೆ ಭಾಗವಹಿಸಿ ಮಾಹಿತಿ ಪಡೆದುಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ತರಬೇತಿದಾರರು ಶ್ರೀಮತಿ ನವೀನ ಅವರು ಸದಸ್ಯರಿಗೆ ಸೀರೆ ಕುಚ್ಚು ತರಬೇತಿ ಹಾಗೂ ಬಾಗಿಲು ತೋರಣ ತರಬೇತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷೆ ನರಸಮ್ಮ , ಜ್ಞಾನವಿಕಾಸ ಸಮನ್ವಯಾಧಿಕಾರಿ ಪ್ರಿಯಾ, ಸೇವಾಪ್ರತಿನಿಧಿ ಕಲ್ಪನಾ ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.
ವರದಿ : ಮಸೀದಿ ಅಬ್ದುಲ್ ಗೌಸ್




















