ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ಮಂಡಲದ ಉಪಾಧ್ಯಕ್ಷರಾಗಿ ಬಿ. ರಮೇಶ ನೇಮಕ

ಬಳ್ಳಾರಿ / ಕಂಪ್ಲಿ : ಕಂಪ್ಲಿ ಮಂಡಲದ ಉಪಾಧ್ಯಕ್ಷರಾಗಿ ಬಿ. ರಮೇಶರವರನ್ನು ಮಾಜಿ ಶಾಸಕ ಟಿ.ಎಚ್.ಸುರೇಶ ಬಾಬು ನೇತೃತ್ವದಲ್ಲಿ ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ ಸಮ್ಮುಖದಲ್ಲಿ ಪಟ್ಟಣದ ತುಂಗಭದ್ರ ಕಾರ್ಯಾಲಯದಲ್ಲಿ ನೇಮಕಾತಿ ಆದೇಶ ಪ್ರತಿಗಳನ್ನು ಶನಿವಾರ ವಿತರಿಸಲಾಯಿತು.
ಪಕ್ಷದ ಶಿಸ್ತು, ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ಮತ್ತು ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು, ಮುಂದಿನ ವರ್ಷದ ಅವಧಿಯಲ್ಲಿ ಪಕ್ಷದ ಸಂಘಟಣೆಯತ್ತ ಹೆಚ್ಚಿನ ಗಮನಹರಿಸಿ ಕಾರ್ಯಕರ್ತರಿಗೆ, ಸ್ಪೂರ್ತಿಯಾಗಿ, ಶಕ್ತಿಯಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ, ಪಕ್ಷದ ಹಿತದೃಷ್ಟಿಯಿಂದ ಪಕ್ಷದ ಒಳಿತಿಗಾಗಿ ಪಕ್ಷದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಮಾಣಿಕವಾಗಿ ಕೆಲಸ ನಿರ್ವಹಿಸಬೇಕು. ಮತ್ತು ಅವಧಿಯಲ್ಲಿ ಪಕ್ಷದ ಸಂಘಟನೆಯನ್ನು ಸದೃಢವಾಗಿ ಮತ್ತು ಅತ್ಯಂತ ಬಲಿಷ್ಠವಾಗಿ ಕಟ್ಟಲು ನಿಮ್ಮ ಪರಿಶ್ರಮ ಹಾಗೂ ಸಮಯ ಅತ್ಯವಶ್ಯವಾಗಿದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ನೂತನ ಉಪಾಧ್ಯಕ್ಷ ಬಿ. ರಮೇಶ ಆದೇಶ ಪ್ರತಿ ಸ್ವೀಕರಿಸಿ ಮಾತನಾಡಿ, ಮಾಜಿ ಸಚಿವರಾದ ಬಿ ಶ್ರೀರಾಮುಲು, ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ ಜನಾರ್ಧನ ರೆಡ್ಡಿ, ಮಾಜಿ ಶಾಸಕ ಸುರೇಶಬಾಬು, ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ ಹಾಗೂ ಎಲ್ಲ ಹಿರಿಯ ಮುಖಂಡರಿಗೂ ಅವರು ನಮ್ಮನ್ನು ಗುರುತಿಸಿ, ಕಂಪ್ಲಿ ಮಂಡಲ ಉಪಾಧ್ಯಕ್ಷರನ್ನಾಗಿ ನೇಮಕಗೊಳಿಸಿರುವುದಕ್ಕೆ ತುಂಬು ಹೃದಯದ ಕೃತಜ್ಞತೆಗಳನ್ನು ತಿಳಿಸಿದರು .

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!