ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪರಿಸರ ಸಂರಕ್ಷಣೆ ಮಾಡದಿದ್ದರೆಭವಿಷ್ಯದ ದಿನಗಳು ಅಪಾಯಕಾರಿ ಡಾ. ಭೇರ್ಯ ರಾಮಕುಮಾರ್ ಎಚ್ಚರಿಕೆ

ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರ ವಿನಾಶ ಮಾಡಿದರೆ ಭವಿಷ್ಯದ ದಿನಗಳು ಮಾನವ ಜನಾಂಗಕ್ಕೆ ಅಪಾಯಕಾರಿ ಆಗಲಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಭೇರ್ಯ ರಾಮಕುಮಾರ್ ನುಡಿದರು.

ಅವರು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮರುಳಯ್ಯನ ಕೊಪ್ಪಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರದಿಂದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.
ಪ್ರತಿಯೊಬ್ಬರೂ ತಮ್ಮ ಜನ್ಮ ದಿನದಂದು, ತಮ್ಮ ತಂದೆ ತಾಯಿಯ ಜನ್ಮ ದಿನದಂದು, ವಿವಾಹ ವಾರ್ಷಿಕೋತ್ಸವ ದಿನದಂದು, ತಮ್ಮ ಹಿರಿಯರ ನೆನಪಿನಲ್ಲಿ ಪ್ರತಿ ವರ್ಷವೂ ಒಂದೊಂದು ಸಸಿ ನೆಡ ಬೇಕು. ಆ ಮೂಲಕ ಭವಿಷ್ಯದ ಜನಾಂಗಕ್ಕೆ ಉತ್ತಮ ಪರಿಸರ ನೀಡಬೇಕು ಎಂದು ನುಡಿದರು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ
ಪರಿಸರ ಸಂರಕ್ಷಣಾ ಪ್ರತಿಜ್ಞೆ ಬೋಧಿಸಿದರು.
ಈ ಸಂದರ್ಭದಲ್ಲಿ ಸಮಾಜಸೇವಕರಾದ ಡಾ.ಚಕ್ರಪಾಣಿ, ಡಾ. ಗುರುಪ್ರಸಾದ್, ಮುಖ್ಯ ಶಿಕ್ಷಕರಾದ ಬಸವರಾಜು ಪರಿಸರ ಸಂರಕ್ಷಣೆ ಕುರಿತು ಮಾತನಾಡಿದರು. ಶಾಲಾ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!