ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೇಂದ್ರ ಅರಣ್ಯ ಸಚಿವರನ್ನು ಭೇಟಿ ಮಾಡಿದ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಶ್ರೀ ಯದುವೀರ್ ಒಡೆಯರ್

ಕೊಡಗು – ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರಾದ ಶ್ರೀ ಭೂಪೇಂದ್ರ ಯಾದವ್ ಅವರನ್ನು ಭೇಟಿಮಾಡಿ ಕೊಡಗಿನಲ್ಲಿ ಹೆಚ್ಚುತ್ತಿರುವ ಆನೆ ಮತ್ತು ಮಾನವ ಸಂಘರ್ಷ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಮತ್ತು ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ ವನ ಯೋಜನೆ ಜಾರಿಗೊಳಿಸುವ ಕುರಿತು ಮನವಿ ಸಲ್ಲಿಸಿದರು.

ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾಡಾನೆಗಳು ಕೃಷಿಭೂಮಿ ಮತ್ತು ಜನವಸತಿ ಪ್ರದೇಶಗಳಿಗೆ ಪ್ರವೇಶಿಸುತ್ತಿರುವ ಘಟನೆ ನಿರಂತರವಾಗಿ ನಡೆಯುತ್ತಿದ್ದು ಅನೇಕ ಸಾವು- ನೋವುಗಳು ಸಂಭವಿಸಿವೆ. ಇದರಿಂದ ರಸ್ತೆತಡೆದು ಪ್ರತಿಭಟನೆಗಳು ಸಹ ನಡೆದವು.
ಬೆಳೆನಷ್ಟ , ಆಸ್ತಿಪಾಸ್ತಿ ಹಾನಿ ಮತ್ತು ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ‌. ಇದರಿಂದ ರೈತರು ಮತ್ತು ಅರಣ್ಯದಂಚಿನಲ್ಲಿ ವಾಸಿಸುವ ಜನರು ತೀವ್ರ ಸಂಕಷ್ಟ ಅನುಭವಿಸುತ್ತ ಇದ್ದಾರೆಂದು ಮನವರಿಕೆ ಮಾಡಿದರು.

ಆನೆ ತಡೆಗೋಡೆಗಳ ಬಲವರ್ಧನೆ ,ಸೌರಬೇಲಿ ವ್ಯವಸ್ಥೆ ,ಚಲನವಲನ ಮೇಲ್ವಿಚಾರಣೆ ,ಮುನ್ನೆಚ್ಚರಿಕೆ ವ್ಯವಸ್ಥೆ , ಅರಣ್ಯ ವಾಸಸ್ಥಳಗಳ ಸುಧಾರಣೆ , ತ್ವರಿತ ಪ್ರತಿಕ್ರಿಯಾ ತಂಡಗಳ ರಚನೆ , ಪೀಡಿತ ಕುಟುಂಬ ಮತ್ತು ರೈತರಿಗೆ ಸೂಕ್ತ ಪರಿಹಾರ ಒದಗಿಸುವ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಚಿವರಿಗೆ ಮನವಿ ಮಾಡಿದರು.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!