ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರ್ಕಾರಿ ಶಾಲೆಗಳ ಗುಣಮಟ್ಟದ ಶಿಕ್ಷಣ ಮತ್ತು ಆಡಳಿತಾತ್ಮಕ ಸುಧಾರಣೆ ಕುರಿತು ಪ್ರಧಾನ ಕಾರ್ಯದರ್ಶಿಗಳಿಗೆ 33 ಅಂಶಗಳ ಮನವಿ ಸಲ್ಲಿಕೆ.

ಕರ್ನಾಟಕ ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ (ರಿ.) ಇದರ ಕಾರ್ಯ ವೈಖರಿಗೆ ಮೆಚ್ಚುಗೆ

ಬೆಂಗಳೂರು : ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆಯ ರಾಜ್ಯ ಸಮಿತಿಯ ನಿರ್ದೇಶಕರು ಜೂ.24 ರಂದು ಬೆಂಗಳೂರಿನ ವಿಧಾನಸೌಧದ ಬಳಿ ಇರುವ ಬಹುಮಹಡಿಗಳ ಕಟ್ಟಡದಲ್ಲಿ ಸಭೆ ಸೇರಿ, ರಾಜ್ಯ ಎಸ್.ಡಿ.ಎಂ.ಸಿ ವೇದಿಕೆ (ರಿ.) ರಾಜ್ಯ ನಿಯೋಗವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರಶ್ಮಿ ಮಹೇಶ್ ಅವರನ್ನು ಭೇಟಿ ಮಾಡಿ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಾಣ ಹಾಗೂ ಶಿಕ್ಷಣ ಇಲಾಖೆಯಲ್ಲಿ ಅಗತ್ಯ ಆಡಳಿತಾತ್ಮಕ ಸುಧಾರಣೆಗಳನ್ನು ಕೈಗೊಳ್ಳುವ ಕುರಿತು ವಿಸ್ತೃತ ಚರ್ಚೆ ನಡೆಸಿತು.
ರಾಜ್ಯದ ಸರ್ಕಾರಿ ಶಾಲೆಗಳ ಪ್ರಸ್ತುತ ಸ್ಥಿತಿ, ಮಕ್ಕಳ ಕಲಿಕಾ ಮಟ್ಟ, ಶಿಕ್ಷಕರ ಮೇಲಿನ ಭೋಧಕೇತರ ಕೆಲಸಗಳ ಒತ್ತಡ, ಪೂರ್ವ ಪ್ರಾಥಮಿಕ ಶಿಕ್ಷಣ, ಶಾಲಾ ಮೂಲಸೌಕರ್ಯ, ದೈಹಿಕ ಶಿಕ್ಷಣ, ವೃತ್ತಿ ಶಿಕ್ಷಣ ಹಾಗೂ ಶಾಲಾ ಆಡಳಿತಕ್ಕೆ ಸಂಬಂಧಿಸಿದಂತೆ ಒಟ್ಟು 33 ಪ್ರಮುಖ ಅಂಶಗಳ ಮನವಿಯನ್ನು ಸಲ್ಲಿಸಲಾಯಿತು.
ಮುಖ್ಯವಾಗಿ ಶಿಕ್ಷಕರನ್ನು BLO ಹಾಗೂ ಇತರೆ ಭೋಧಕೇತರ ಕರ್ತವ್ಯಗಳಿಂದ ಮುಕ್ತಗೊಳಿಸುವುದು, ಇಲಾಖಾ ಅಧಿಕಾರಿಗಳಿಂದ ಶಾಲಾ ಮಟ್ಟದಲ್ಲಿ ಕಲಿಕಾ ಗುಣಮಟ್ಟದ ಪರಿಣಾಮಕಾರಿ ಮೇಲ್ವಿಚಾರಣೆ, ECCE ಹಾಗೂ ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಎಸ್‌ಡಿಎಂಸಿ ಪಾತ್ರವನ್ನು ಬಲಪಡಿಸುವುದು, ಪೂರ್ವ ಪ್ರಾಥಮಿಕ ಶಿಕ್ಷಕರು ಮತ್ತು ಆಯಾಗಳಿಗೆ ನೇರವಾಗಿ ಗೌರವಧನ ಜಮಾ ಮಾಡುವುದು, KPS ಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು, ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯನ್ನು ನಿವಾರಿಸುವುದು ಹಾಗೂ NSQF ಅಡಿಯಲ್ಲಿ ಸ್ಥಗಿತಗೊಂಡಿರುವ Retail, Beauty & Wellness ಮತ್ತು Apparels ವೃತ್ತಿ ಶಿಕ್ಷಣ ಕೋರ್ಸ್‌ಗಳನ್ನು ಪುನರಾರಂಭಿಸುವಂತೆ ಒತ್ತಾಯಿಸಲಾಯಿತು.
ಶಾಲೆಗಳಲ್ಲಿ CCTV ಅಳವಡಿಕೆ, ಅಕ್ಷರ ದಾಸೋಹ ಯೋಜನೆಯ ಸಂಪೂರ್ಣ ಜವಾಬ್ದಾರಿಯನ್ನು ಎಸ್‌ಡಿಎಂಸಿಗೆ ನೀಡುವುದು, BEO ಹಾಗೂ DDPI ಕಚೇರಿಗಳ ಆಡಳಿತಾತ್ಮಕ ಸುಧಾರಣೆ, FLN ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನ, ಪಠ್ಯಪುಸ್ತಕಗಳ ಸಮಯೋಚಿತ ವಿತರಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಗಮನ ಸೆಳೆಯಲಾಯಿತು.
ಇದಲ್ಲದೆ, SGF (School Games Federation) ಸ್ಪರ್ಧಾ ಪಟ್ಟಿಯಲ್ಲಿ ಇಲ್ಲದಿದ್ದರೂ ಕಳೆದ ಹಲವು ವರ್ಷಗಳಿಂದ ಯಶಸ್ವಿಯಾಗಿ ಆಯೋಜಿಸಲಾಗುತ್ತಿದ್ದ ಥ್ರೋ ಬಾಲ್, ಬಾಲ್ ಬ್ಯಾಡ್ಮಿಂಟನ್ ಹಾಗೂ ಜಂಪ್ ರೋಪ್ ಕ್ರೀಡೆಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೂ ಮುಂದುವರಿಸಲು ಅಗತ್ಯ ನಿರ್ದೇಶನ ನೀಡುವಂತೆ ಮನವಿ ಮಾಡಲಾಯಿತು.
ಸಭೆಯಲ್ಲಿ ಸಲ್ಲಿಸಲಾದ ಅನೇಕ ವಿಷಯಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿ ಮತ್ತು ಸರ್ಕಾರಿ ಶಾಲೆಗಳ ಬಲವರ್ಧನೆಗೆ ನೇರವಾಗಿ ಸಂಬಂಧಿಸಿದ್ದು, ತಕ್ಷಣ ಜಾರಿಗೊಳಿಸಬಹುದಾದ ವಿಷಯಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೇ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವ ಬಗ್ಗೆ ಪ್ರಧಾನ ಕಾರ್ಯದರ್ಶಿಗಳು ಸಕಾರಾತ್ಮಕ ಸ್ಪಂದನೆ ನೀಡಿದರು. ಈ ವೇಳೆ ನಿಯೋಗದಲ್ಲಿ ರಾಜ್ಯ ಸಂಚಾಲಕರಾದ ಮೊಯ್ದಿನ್ ಕುಟ್ಟಿ, ರಾಜ್ಯ ನಿರ್ದೇಶಕರಾದ ಶರಣಬಸಪ್ಪ. ಕೆ.ದಾನಕೈ ಕೊಪ್ಪಳ, ಉಮ್ಮರ್ ಟೆಕ್ನಿಕ್, ಜಿ.ಎಂ. ಮಹಮ್ಮದ್ ಕುಂಞಿ, ಸಣ್ಣೇಗೌಡ, ಆಶಾ, ಹೆನ್ರಿ ಏಸುದಾಸ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರಾದ ವೆಂಕಟೇಶ್ ಎಸ್.ಎಲ್.ವಿ., ಪ್ರಧಾನ ಕಾರ್ಯದರ್ಶಿ ಯಶೋಧ, ಬೆಂಗಳೂರು ಉತ್ತರ ನಿರ್ದೇಶಕರಾದ ಗೀತಾ ಅತ್ತಿಬೆಲೆ, ಗದಗ ನಿರ್ದೇಶಕರಾದ ಹೇಮಂತ್ ಇಟಗಿ, ದಾವಣಗೆರೆಯ ರೂಪ, ರೇಖಾ, ಶಾಕಿರಸಾಗರ, ಶಿವಮೊಗ್ಗದ ನಗೀನ ಹಾಗೂ ಶರೀಫ್ ಕೆಳಿಂಜ ಸೇರಿದಂತೆ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!